ಬಾಲಿವುಡ್

ಶಾರುಖ್ ಖಾನ್-ದೀಪಿಕಾ ಪಡುಕೋಣೆ ನಟನೆಯ 'ಪಠಾಣ್' ಪ್ರೈಮ್ ವಿಡಿಯೋದಲ್ಲಿ ಬಿಡುಗಡೆ

ಶಾರುಖ್ ಖಾನ್ ಅಭಿನಯದ 'ಪಠಾಣ್' ಸಿನಿಮಾ 50 ದಿನಗಳ ಕಾಲ ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್ ಆದ ನಂತರ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್‌ಗೆ ಲಭ್ಯವಿರುತ್ತದೆ.

ಶಾರುಖ್ ಖಾನ್-ದೀಪಿಕಾ ಪಡುಕೋಣೆ ನಟನೆಯ 'ಪಠಾಣ್' ಪ್ರೈಮ್ ವಿಡಿಯೋದಲ್ಲಿ ಬಿಡುಗಡೆ
ಪಠಾಣ್ ಚಿತ್ರದ ಫೋಸ್ಟರ್
Published On :

ಮುಂಬೈ: ಶಾರುಖ್ ಖಾನ್ ಅಭಿನಯದ 'ಪಠಾಣ್' ಸಿನಿಮಾ 50 ದಿನಗಳ ಕಾಲ ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್ ಆದ ನಂತರ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್‌ಗೆ ಲಭ್ಯವಿರುತ್ತದೆ.

ಈ ಕುರಿತು ಪ್ರೈಮ್ ವಿಡಿಯೋ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಹಂಚಿಕೊಂಡಿದ್ದು, 'ನಾಲ್ಕು ವರ್ಷಗಳಿಗಿಂತಲೂ ಹೆಚ್ಚು ಕಾಲ ಪ್ರಮುಖ ಪಾತ್ರಗಳಿಂದ ದೂರವಿದ್ದ ಶಾರುಖ್‌ಗೆ ಭರ್ಜರಿ ಕಮ್‌ಬ್ಯಾಕ್ ನೀಡಿದ ಜಾಗತಿಕವಾಗಿ ಭರ್ಜರಿ ಯಶಸ್ಸು ಕಂಡ ಸ್ಪೈ ಥ್ರಿಲ್ಲರ್ ಪಠಾಣ್ ಸಿನಿಮಾ ಬುಧವಾರದಿಂದ ತನ್ನ ವೇದಿಕೆಯಲ್ಲಿ ಸ್ಟ್ರೀಮಿಂಗ್ ಆಗಲಿದೆ' ಎಂದಿದೆ.

'ಹವಾಮಾನದಲ್ಲಿ ಪ್ರಕ್ಷುಬ್ಧತೆಯನ್ನು ನಾವು ಕಾಣುತ್ತಿದ್ದೇವೆ. ಇದೆಲ್ಲದರ ನಂತರ 'ಪಠಾಣ್' ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಮಾರ್ಚ್ 22 ರಂದು ಬಿಡುಗಡೆಯಾಗಲಿದೆ' ಎಂದು ಪ್ರೈಮ್ ವಿಡಿಯೋ ಟ್ವೀಟ್ ಮಾಡಿದೆ.

ಸಿದ್ಧಾರ್ಥ್ ಆನಂದ್ ನಿರ್ದೇಶನದ ಪಠಾಣ್ ಜನವರಿ 25ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು ಮತ್ತು ಗಲ್ಲಾಪೆಟ್ಟಿಗೆಯಲ್ಲಿ ವಿಶ್ವದಾದ್ಯಂತ 1,000 ಕೋಟಿ ರೂ. ಗಳಿಸಿ ಹಲವು ದಾಖಲೆಗಳನ್ನು ಪುಡಿಪುಡಿ ಮಾಡಿತು.

ಯಶ್ ರಾಜ್ ಫಿಲ್ಮ್ಸ್ (ವೈಆರ್‌ಎಫ್) ನಿರ್ಮಾಣದ 'ಪಠಾನ್' ಸಿನಿಮಾದಲ್ಲಿ ಶಾರುಖ್ ಅವರೊಂದಿಗೆ ಜಾನ್ ಅಬ್ರಹಾಂ, ದೀಪಿಕಾ ಪಡುಕೋಣೆ, ಡಿಂಪಲ್ ಕಪಾಡಿಯಾ ಮತ್ತು ಅಶುತೋಷ್ ರಾಣಾ ಸಹ ನಟಿಸಿದ್ದಾರೆ.

ಈ ಚಿತ್ರ ಸಲ್ಮಾನ್ ಖಾನ್ ಅವರ 'ಏಕ್ ಥಾ ಟೈಗರ್' ಮತ್ತು 'ಟೈಗರ್ ಜಿಂದಾ ಹೈ' , ಮತ್ತು ಹೃತಿಕ್ ರೋಷನ್ ಅವರ 'ವಾರ್' ನಂತರ ನಿರ್ಮಾಪಕ ಆದಿತ್ಯ ಚೋಪ್ರಾ ಅವರ ನಾಲ್ಕನೇ ಸ್ಪೈ ಚಿತ್ರವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.