ಮದುವೆ ಪ್ರೀತಿಯ ಬಂಧನ: ಸಲಿಂಗ ವಿವಾಹಕ್ಕೆ ಕಂಗನಾ ಬೆಂಬಲ!
ಸಲಿಂಗ ವಿವಾಹಕ್ಕೆ ಬೆಂಬಲ ನೀಡಿರುವ ಬಾಲಿವುಡ್ ನಟಿ ನಟಿ ಕಂಗನಾ ರಣಾವತ್ "ಹೃದಯಗಳು ಒಂದಾಗಿರುವಾಗ" ಜನರ ಆದ್ಯತೆಗಳು ಮುಖ್ಯವಲ್ಲ ಎಂದು ಹೇಳಿದ್ದಾರೆ.

ಮುಂಬೈ: ಸಲಿಂಗ ವಿವಾಹಕ್ಕೆ ಬೆಂಬಲ ನೀಡಿರುವ ಬಾಲಿವುಡ್ ನಟಿ ನಟಿ ಕಂಗನಾ ರಣಾವತ್ "ಹೃದಯಗಳು ಒಂದಾಗಿರುವಾಗ" ಜನರ ಆದ್ಯತೆಗಳು ಮುಖ್ಯವಲ್ಲ ಎಂದು ಹೇಳಿದ್ದಾರೆ. ಮದುವೆಯನ್ನು ಪ್ರೀತಿಯ ಬಂಧನ ಎಂದು ರಾಷ್ಟ್ರೀಯ ಪ್ರಶಸ್ತಿ ವಿಜೇತರಾಗಿರುವ ಕಂಗನಾ ಬಣ್ಣಿಸಿದ್ದಾರೆ.
ಹರಿದ್ವಾರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಂಗನಾ, ಮದುವೆಯು ಪ್ರೀತಿಯ ಬಂಧವಾಗಿದೆ. ಜನರ ಹೃದಯಗಳು ಒಂದಾಗಿರುವಾಗ, ಅವರ ಆದ್ಯತೆ ಏನು, ಎಂಬುದರ ಬಗ್ಗೆ ನಾವು ಏನು ಹೇಳಬಹುದು? ಎಂದು ಪ್ರಶ್ನಿಸಿದರು.
ಸಲಿಂಗ ವಿವಾಹ ಬಗ್ಗೆ ಮಾತನಾಡಲು ಹೆಚ್ಚಿನ ತಾರೆಯರು ನಾಚಿಕೆಪಡುವ ಸಮಯದಲ್ಲಿ 'ಮದುವೆ ಸಮಾನತೆ''ಬೆಂಬಲಿಸಿದ್ದಕ್ಕಾಗಿ 2017 ರ ಸಿಮ್ರಾನ್ ಸಿನಿಮಾದ ಸಹ-ಲೇಖಕರಾದ ಅಪೂರ್ವ ಅಸ್ರಾಣಿ ಕಂಗನಾ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಎಸ್‌ಕೆ ಕೌಲ್, ಎಸ್ ರವೀಂದ್ರ ಭಟ್, ಪಿಎಸ್ ನರಸಿಂಹ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಐವರ ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಸಲಿಂಗ ವಿವಾಹ ಕಾನೂನು ಮಾನ್ಯತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


