ಮೇ 13ಕ್ಕೆ ನಟಿ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ ನಿಶ್ಚಿತಾರ್ಥ
ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರು, ಮೇ 13ರಂದು ನಿಶ್ಚಿತಾರ್ಥ ಮಾಡಿಕೊಳ್ಳಲು ನಿರ್ಧರಿಸಿದ್ದು, ಕೊನೆಗೂ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರು, ಮೇ 13ರಂದು ನಿಶ್ಚಿತಾರ್ಥ ಮಾಡಿಕೊಳ್ಳಲು ನಿರ್ಧರಿಸಿದ್ದು, ಕೊನೆಗೂ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಮೇ 13 ರಂದು ನವದೆಹಲಿಯಲ್ಲಿ ಇಬ್ಬರೂ ಉಂಗುರ ಬದಲಾಯಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಿಶ್ಚಿತಾರ್ಥ ಸಮಾರಂಭಕ್ಕೆ ಸುಮಾರು 150 ಆಪ್ತ ಸ್ನೇಹಿತರು ಮತ್ತು ಕುಟುಂಬ ಸದಸ್ಯರಿಗಷ್ಟೇ ಆಹ್ವಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ರಾಜಕೀಯ ಮತ್ತು ಚಿತ್ರರಂಗದ ಹಲವಾರು ಸದಸ್ಯರು ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಮುಂಬೈನಲ್ಲಿ ರೆಸ್ಟೋರೆಂಟ್ಗಳ ಬಳಿ, ವಿಮಾನ ನಿಲ್ದಾಣದಲ್ಲಿ ಈ ಜೋಡಿ ಒಟ್ಟಿಗೆ ಕಾಣಿಸಿಕೊಂಡ ಹಿನ್ನೆಲೆ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆಂದು ಹೇಳಲಾಗುತ್ತಿತ್ತು. ಇತ್ತೀಚೆಗಷ್ಟೇ ಮೊಹಾಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯಾವಳಿ ವೇಳೆ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಈ ಚಿತ್ರಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಇದೀಗ ಇಬ್ಬರೂ ನಿಶ್ಚಿತಾರ್ಥಕ್ಕೆ ನಿರ್ಧಾರ ಮಾಡಿರುವ ಹಿನ್ನೆಲೆಯಲ್ಲಿ ರಾಜಕೀಯ ಮತ್ತು ಸಿನಿಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಜೋಡಿಗೆ ಶುಭ ಕೋರುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


