Dunki teaser: ಶಾರುಖ್ ಖಾನ್ ಜನ್ಮದಿನಕ್ಕೆ 'ಡಂಕಿ' ಟೀಸರ್ ಔಟ್, ರಾಜ್ಕುಮಾರ್ ಹಿರಾನಿ ಮತ್ತೆ ಮ್ಯಾಜಿಕ್!
ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ಬಹು ನಿರೀಕ್ಷಿತ ಡಂಕಿ ಚಿತ್ರದ ಮೊದಲ ಟೀಸರ್ ಬಿಡುಗಡೆಯಾಗಿದ್ದು, 3 ಈಡಿಯಟ್ಸ್ ಖ್ಯಾತಿಯ ರಾಜ್ ಕುಮಾರ್ ಹಿರಾನಿ ನಿರ್ದೇಶನದ ಈ ಚಿತ್ರ ವಲಸಿಗರ ಕುರಿತ ಕಥಾ ಹಂದರವನ್ನು ಒಳಗೊಂಡಿದೆ.

ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ಬಹು ನಿರೀಕ್ಷಿತ ಡಂಕಿ ಚಿತ್ರದ ಮೊದಲ ಟೀಸರ್ ಬಿಡುಗಡೆಯಾಗಿದ್ದು, 3 ಈಡಿಯಟ್ಸ್ ಖ್ಯಾತಿಯ ರಾಜ್ ಕುಮಾರ್ ಹಿರಾನಿ ನಿರ್ದೇಶನದ ಈ ಚಿತ್ರ ವಲಸಿಗರ ಕುರಿತ ಕಥಾ ಹಂದರವನ್ನು ಒಳಗೊಂಡಿದೆ.
ಶಾರುಖ್ ಖಾನ್ ಅವರ ಜನ್ಮದಿನದ ನಿಮಿತ್ತ ಡಂಕಿ ಚಿತ್ರದ ಟೀಸರ್ ಅನಾವರಣಗೊಳಿಸಲಾಗಿದೆ. ಚಿತ್ರ ತಯಾರಕರು ತಮ್ಮ ಮುಂದಿನ ಬಹುನಿರೀಕ್ಷಿತ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮುಖೇನ ಶಾರುಖ್ ಖಾನ್ ಜನ್ಮದಿನವನ್ನು ವಿಶೇಷವಾಗಿಸಿದ್ದಾರೆ.
2023ರ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ 'ಡಂಕಿ' ಟೀಸರ್ ಬಿಡುಗಡೆಗೆ ಚಿತ್ರತಯಾರಕರು ವಿಶೇಷ ಸಂದರ್ಭಕ್ಕಾಗಿ ಕಾದಿದ್ದರು. ಇದೀಗ ಶಾರುಖ್ ಖಾನ್ ಜನ್ಮ ದಿನದಂದೇ ಡಂಕಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ಅಂದಹಾಗ ಚಿತ್ರದ ತಂಡ ಟೀಸರ್ ಅನ್ನು 2 ಭಾಗಗಳಲ್ಲಿ ರಿಲೀಸ್ ಮಾಡಲು ಸಿದ್ಧವಾಗಿದ್ದು, ಈ ಪೈಕಿ ಈಗ ಮೊದಲ ಟೀಸರ್ ಮಾತ್ರ ಬಿಡುಗಡೆಯಾಗಿದೆ. ರಾಜ್ ಕುಮಾರ್ ಹಿರಾನಿ ನಿರ್ದೇಶನದ ಚಿತ್ರವನ್ನು ಶಾರುಖ್ ಖಾನ್ ಅವರ ಬ್ಯಾನರ್, ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಅಡಿಯಲ್ಲಿ ನಿರ್ಮಾಣ ಮಾಡಲಾಗಿದ್ದು, ತಾಪ್ಸಿ ಪನ್ನು ಎಸ್ಆರ್ಕೆ ಜೊತೆ ಸ್ಕ್ರೀನ್ ಶೇರ್ ಮಾಡಿದ್ದು, ವಿಶೇಷ ಪಾತ್ರಗಳಲ್ಲಿ ವಿಕ್ಕಿ ಕೌಶಲ್ ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


