'ತೀವ್ರ ಆಘಾತವಾಯಿತು': ನಟಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋದಲ್ಲಿರುವ ORIGINAL ಮಹಿಳೆ ಪ್ರತಿಕ್ರಿಯೆ, ಮೂಲ ವಿಡಿಯೋ ಇಲ್ಲಿದೆ!
ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದ್ದು, ವ್ಯಾಪಕ ಆಕ್ರೋಶಗಳ ನಡುವೆ ಈ ವಿಡಿಯೋದಲ್ಲಿರುವ ORIGINAL ಮಹಿಳೆ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ತೀವ್ರ ಆಘಾತವಾಯಿತು ಎಂದು ಹೇಳಿದ್ದಾರೆ.

ನವದೆಹಲಿ: ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದ್ದು, ವ್ಯಾಪಕ ಆಕ್ರೋಶಗಳ ನಡುವೆ ಈ ವಿಡಿಯೋದಲ್ಲಿರುವ ORIGINAL ಮಹಿಳೆ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ತೀವ್ರ ಆಘಾತವಾಯಿತು ಎಂದು ಹೇಳಿದ್ದಾರೆ.
ಹೌದು.. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದ್ದು, ವಿಡಿಯೋ ಕುರಿತು ಸ್ವತಃ ಆಘಾತ ವ್ಯಕ್ತಪಡಿಸಿದ್ದ ಬಿಗ್ ಬಿ ಅಮಿತಾಬ್ ಬಚ್ಚನ್ ಧನಿ ಎತ್ತಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆ ಮನವಿ ಮಾಡಿದ್ದಾರೆ. ಈ ವಿಡಿಯೋಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ ಇತ್ತ ವಿಡಿಯೋದಲ್ಲಿರುವ ಒರಿಜಿನಲ್ ಮಹಿಳೆ ಈ ಕುರಿತು ತಮ್ಮ ಆಘಾತ ವ್ಯಕ್ತಪಡಿಸಿದ್ದಾರೆ.
ಡೀಪ್ ಫೇಕ್ ವಿಡಿಯೋದಲ್ಲಿರುವ ಒರಿಜಿನಲ್ ಮಹಿಳೆಯನ್ನು ಝಕಾ ಪಟೇಲ್ ಎಂದು ಗುರುತಿಸಲಾಗಿದ್ದು, ಈ ಕುರಿತು ಆಕೆಯೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದು ಮಾತ್ರವಲ್ಲದೇ ಆಘಾತ ವ್ಯಕ್ತಪಡಿಸಿದ್ದಾರೆ. 'ನಿಜಕ್ಕೂ ವಿಡಿಯೋ ನೋಡಿ ಆಘಾತವಾಯಿತು. ನನ್ನ ದೇಹಕ್ಕೆ ರಶ್ಮಿಕಾ ಅವರ ಮುಖ ಹಾಕಿ ಫೇಕ್ ಮಾಡಲಾಗಿದೆ. ಈ ಘಟನೆ ಮಹಿಳೆಯರು ಮತ್ತು ಹುಡುಗಿಯರ ಭವಿಷ್ಯದ ಬಗ್ಗೆ ಚಿಂತೆ ಮಾಡುವಂತೆ ಮಾಡಿದೆ. ಈಗ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ತಮ್ಮನ್ನು ತಾವು ಇರಿಸಿಕೊಳ್ಳುವ ಬಗ್ಗೆ "ಇನ್ನಷ್ಟು ಭಯಪಡಬೇಕಾಗಿದೆ" ಎಂದು ಹೇಳಿದ್ದಾರೆ.
"ಎಲ್ಲರಿಗೂ ನಮಸ್ಕಾರ, ನನ್ನ ದೇಹ ಮತ್ತು ಬಾಲಿವುಡ್‌ನ ಜನಪ್ರಿಯ ನಟಿಯ ಮುಖವನ್ನು ಬಳಸಿಕೊಂಡು ಯಾರೋ ಒಬ್ಬರು ಡೀಪ್‌ಫೇಕ್ ವೀಡಿಯೊವನ್ನು ರಚಿಸಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಡೀಪ್‌ಫೇಕ್ ವೀಡಿಯೊದೊಂದಿಗೆ ನನಗೆ ಯಾವುದೇ ಸಂಬಂಧವಿಲ್ಲ ಮತ್ತು ಏನಾಗುತ್ತಿದೆ ಎಂಬುದರ ಬಗ್ಗೆ ನಾನು ತೀವ್ರವಾಗಿ ವಿಚಲಿತಳಾಗಿದ್ದೇನೆ ಮತ್ತು ಅಸಮಾಧಾನಗೊಂಡಿದ್ದೇನೆ ಎಂದು ಝರಾ ಪಟೇಲ್ ಇನ್ ಸ್ಟಾಗ್ರಾಮ್ ನಲ್ಲಿ ತಿಳಿಸಿದ್ದಾರೆ.
"ಸೋಷಿಯಲ್ ಮೀಡಿಯಾದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರ ಬಗ್ಗೆ ಈಗ ಇನ್ನಷ್ಟು ಭಯಪಡಬೇಕಾಗಿದೆ. ಮಹಿಳೆಯರು ಮತ್ತು ಹುಡುಗಿಯರ ಭವಿಷ್ಯದ ಬಗ್ಗೆ ನಾನು ಚಿಂತೆ ಮಾಡುವಂತಾಗಿದೆ. ದಯವಿಟ್ಟು ಸ್ವಲ್ಪ ಹಿಂದೆ ಸರಿಯಿರಿ ಮತ್ತು ಇಂಟರ್ನೆಟ್‌ನಲ್ಲಿ ನೀವು ನೋಡುವ ಸಂಗತಿಗಳನ್ನು ಪರಿಶೀಲಿಸಿ. ಇಂಟರ್ನೆಟ್‌ನಲ್ಲಿರುವ ಎಲ್ಲವೂ ನಿಜವಲ್ಲ" ಎಂದು ಅವರು ಹೇಳಿದ್ದಾರೆ.
ಇತ್ತೀಚೆಗೆ ರಶ್ಮಿಕಾ ಮಂದಣ್ಣ ಲಿಫ್ಟ್‌ಗೆ ಪ್ರವೇಶಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ಮೂಲವಾಗಿ ಈ ವಿಡಿಯೋದಲ್ಲಿರುವುದು ಇದೇ ಝರಾ ಪಟೇಲ್ ಎಂಬ ಮಹಿಳೆ. ಆದರೆ ಅವರ ದೇಹಕ್ಕೆ ರಶ್ಮಿಕಾ ಅವರ ಮುಖವನ್ನು ಡೀಪ್ ಫೇಕ್ ತಂತ್ರಜ್ಞಾನ ಬಳಸಿಕೊಂಡು ಹಾಕಲಾಗಿದೆ. ಹೀಗಾಗಿ ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


