ಬಾಲಿವುಡ್

ಜೀವ ಬೆದರಿಕೆ: ಬಾಲಿವುಡ್ ನಟ ಶಾರೂಕ್ ಖಾನ್ ಗೆ Y+ ಭದ್ರತೆ

'ಪಠಾಣ್' ಮತ್ತು 'ಜವಾನ್' ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ನಟ ದೂರು ನೀಡಿದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಅವರಿಗೆ ವೈ+ ಭದ್ರತೆಯನ್ನು ಒದಗಿಸಿದ್ದಾರೆ.

ಜೀವ ಬೆದರಿಕೆ: ಬಾಲಿವುಡ್ ನಟ ಶಾರೂಕ್ ಖಾನ್ ಗೆ Y+ ಭದ್ರತೆ
ಶಾರೂಕ್ ಖಾನ್
Published On :

ಮುಂಬೈ: 'ಪಠಾಣ್' ಮತ್ತು 'ಜವಾನ್' ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ನಟ ದೂರು ನೀಡಿದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಅವರಿಗೆ ವೈ+ ಭದ್ರತೆಯನ್ನು ಒದಗಿಸಿದ್ದಾರೆ.

Y+ ಭದ್ರತೆ ಅಡಿಯಲ್ಲಿ, ಶಾರೂಕ್ ಖಾನ್ ಅವರಿಗೆ ದಿನಪೂರ್ತಿ 24 ಗಂಟೆಗಳ ಕಾಲ ಆರು ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿಯಿರುತ್ತಾರೆ. ಇದಕ್ಕೂ ಮುನ್ನ ಶಾರೂಕ್ ಖಾನ್ ಇಬ್ಬರು ಭದ್ರತಾ ಸಿಬ್ಬಂದಿಯ ರಕ್ಷಣೆಯಲ್ಲಿದ್ದರು. 

ಶಾರೂಕ್ ಖಾನ್ ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದು ತಮ್ಮ ಚಿತ್ರ ಯಶಸ್ವಿಯಾದ ನಂತರ ತನಗೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಶಾರೂಕ್ ಖಾನ್ ಅವರಿಗೆ ಭದ್ರತೆ ಹೆಚ್ಚಿಸಿದೆ. 

ಈ ಹಿಂದೆ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆಯ ನಂತರ ಕಳೆದ ವರ್ಷ ನಟ ಸಲ್ಮಾನ್ ಖಾನ್‌ಗೆ Y+ ಭದ್ರತೆಯನ್ನು ಒದಗಿಸಲಾಗಿತ್ತು. 

ಮಹಾರಾಷ್ಟ್ರ ಸರ್ಕಾರದ ನೀತಿಯ ಪ್ರಕಾರ, ಜೀವ ಬೆದರಿಕೆಯನ್ನು ಎದುರಿಸುತ್ತಿರುವ ನಾಗರಿಕರಿಗೆ ಭದ್ರತೆಯನ್ನು ಒದಗಿಸಲಾಗಿದೆ. ಸರ್ಕಾರ ಒದಗಿಸುವ ರಕ್ಷಣೆಗೆ ಭದ್ರತೆ ಪಡೆದವರು ಶುಲ್ಕವನ್ನು ಪಾವತಿಸಬೇಕು ಮತ್ತು ಭದ್ರತಾ ಮೊತ್ತವನ್ನು ಠೇವಣಿ ಮಾಡಬೇಕಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.