ಕುಡಿದು ವಾಹನ ಚಾಲನೆ ಪ್ರಕರಣ: ನಟ ದಲೀಪ್ ತಾಹಿಲ್‌ಗೆ ಎರಡು ತಿಂಗಳ ಜೈಲು ಶಿಕ್ಷೆ
2018ರಲ್ಲಿ ಕುಡಿದು ವಾಹನ ಚಲಾಯಿಸಿದ ಪ್ರಕರಣದಲ್ಲಿ ಹಿರಿಯ ನಟ ದಲೀಪ್ ತಾಹಿಲ್ ಅವರಿಗೆ ಇತ್ತೀಚೆಗೆ ಎರಡು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅಂದು ನಟ ಕುಡಿದು ಕಾರು ಚಲಾಯಿಸಿಕೊಂಡು ಹೋಗಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದರು.

ಮುಂಬೈ: 2018ರಲ್ಲಿ ಕುಡಿದು ವಾಹನ ಚಲಾಯಿಸಿದ ಪ್ರಕರಣದಲ್ಲಿ ಹಿರಿಯ ನಟ ದಲೀಪ್ ತಾಹಿಲ್ ಅವರಿಗೆ ಇತ್ತೀಚೆಗೆ ಎರಡು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅಂದು ನಟ ಕುಡಿದು ಕಾರು ಚಲಾಯಿಸಿಕೊಂಡು ಹೋಗಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದರು.
ಪ್ರಕರಣದಲ್ಲಿ ವೈದ್ಯಕೀಯ ತಜ್ಞರು ಸಾಕ್ಷ್ಯ ನೀಡಿದ ನಂತರ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಿಂದ ಶಿಕ್ಷೆ ಪ್ರಕಟವಾಯಿತು. 2018ರಲ್ಲಿ ನಡೆದ ಈ ಘಟನೆಯಲ್ಲಿ ಆಟೋ ರಿಕ್ಷಾದಲ್ಲಿದ್ದ ಜೆನಿತಾ ಗಾಂಧಿ (21) ಮತ್ತು ಗೌರವ್ ಚುಗ್ (22) ಎಂಬ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದರು.
ಮಾಹಿತಿಯ ಪ್ರಕಾರ, ಖಾರ್ ಪೊಲೀಸ್ ಅಧಿಕಾರಿಯೊಬ್ಬರು, ಅಪಘಾತದಲ್ಲಿ ಜೆನಿತಾ ಗಾಂಧಿಯವರ ಬೆನ್ನು ಮತ್ತು ಕುತ್ತಿಗೆಗೆ ತೀವ್ರ ಗಾಯವಾಗಿತ್ತು. ವರದಿಯ ಪ್ರಕಾರ, ತಾಹಿಲ್ ಸ್ಥಳದಿಂದ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದಾಗ, ಅವರನ್ನು ಅಂತಿಮವಾಗಿ ಸ್ಥಳಿಯರು ಹಿಡಿದುಕೊಂಡಿದ್ದರು. ಅಂತಿಮವಾಗಿ ಪೊಲೀಸರು ನಿರ್ಲಕ್ಷ್ಯದ ಚಾಲನೆಯಿಂದ ಗಾಯಗೊಂಡಿದ್ದಕ್ಕಾಗಿ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ತಾಹಿಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ದಕ್ಕಾಗಿ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಕಿಚ್ಚನಿಗೆ ಜೋಡಿಯಾದ ಕೆಜಿಎಫ್ ಬೆಡಗಿ ಶ್ರೀನಿಧಿ ಶೆಟ್ಟಿ
ಖಾರ್ ಪೊಲೀಸ್ ಅಧಿಕಾರಿಯ ಪ್ರಕಾರ, ತಾಹಿಲ್ ಮತ್ತು ಇಬ್ಬರು ಆಟೋ ಪ್ರಯಾಣಿಕರನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಾಗ, ತಾಹಿಲ್ ತಮ್ಮ ರಕ್ತದ ಮಾದರಿಯನ್ನು ನೀಡಲು ನಿರಾಕರಿಸಿದರು. ಆತನನ್ನು ವಶಕ್ಕೆ ಪಡೆದು ನಂತರ ಜಾಮೀನು ನೀಡಲಾಗಿತ್ತು.
ತಾಹಿಲ್ ತಮ್ಮ ವೃತ್ತಿ ಜೀವನದಲ್ಲಿ ಹಲವು ಹಿಂದಿ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ತಮ್ಮ ಪಾತ್ರಗಳಿಗೆ ಜನಪ್ರಿಯರಾಗಿದ್ದಾರೆ. ಬಾಜಿಗರ್‌ನಲ್ಲಿ ಶಾರುಖ್ ಖಾನ್, ಕಹೋ ನಾ ಪ್ಯಾರ್ ಹೈನಲ್ಲಿ ಹೃತಿಕ್ ರೋಷನ್ ಮತ್ತು ಇಷ್ಕ್‌ನಲ್ಲಿ ಅಮೀರ್ ಖಾನ್ ಮತ್ತು ಅಜಯ್ ದೇವಗನ್ ಅವರೊಂದಿಗೆ ಕೆಲಸ ಮಾಡಿದ್ದಾರೆ. ನಟ ರೇಸ್, ಅಜ್ಞಾತವಾಸ, ಡರ್ ಮತ್ತು ಇನ್ನೂ ಅನೇಕ ಜನಪ್ರಿಯ ಚಿತ್ರಗಳ ಭಾಗವಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


