ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಬಿಗ್ ಬಿ ಅಮಿತಾಬ್ ಬಚ್ಚನ್ ಮೊಮ್ಮಗಳು ಆರಾಧ್ಯ!
ಬಾಲಿವುಡ್ 'ಬಿಗ್ ಬಿ' ಅಮಿತಾಭ್ ಬಚ್ಚನ್ ಅವರ ಮೊಮ್ಮಗಳು, ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಅವರ ಪುತ್ರಿಯೂ ಆಗಿರುವ 11 ವರ್ಷದ ಆರಾಧ್ಯಾ ಬಚ್ಚನ್ ಅವರು ದೆಹಲಿಯ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಬಾಲಿವುಡ್ 'ಬಿಗ್ ಬಿ' ಅಮಿತಾಭ್ ಬಚ್ಚನ್ ಅವರ ಮೊಮ್ಮಗಳು, ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಅವರ ಪುತ್ರಿಯೂ ಆಗಿರುವ 11 ವರ್ಷದ ಆರಾಧ್ಯಾ ಬಚ್ಚನ್ ಅವರು ದೆಹಲಿಯ ಹೈಕೋರ್ಟ್ ಮೊರೆ ಹೋಗಿದ್ದಾರೆ.
ತನ್ನ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಗಳನ್ನು ವರದಿ ಮಾಡಿದ್ದಕ್ಕಾಗಿ ಯೂಟ್ಯೂಬ್ ಟ್ಯಾಬ್ಲಾಯ್ಡ್ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತಮ್ಮ ಆರೋಗ್ಯದ ಬಗ್ಗೆ 'ನಕಲಿ ಸುದ್ದಿ' ವರದಿ ಮಾಡಿದ್ದಕ್ಕಾಗಿ ಯೂಟ್ಯೂಬ್ ಟ್ಯಾಬ್ಲಾಯ್ಡ್ ವಿರುದ್ಧ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್ 20 ರಂದು ವಿಚಾರಣೆ ನಡೆಯಲಿದೆ.
11 ವರ್ಷದ ಬಾಲಕಿ ತಾನು ಅಪ್ರಾಪ್ತ ವಯಸ್ಸಿನವಳಾಗಿರುವುದರಿಂದ ತನ್ನ ಬಗ್ಗೆ ಮಾಧ್ಯಮಗಳು ಇಂತಹ ವರದಿ ಮಾಡುವುದರ ವಿರುದ್ಧ ತಡೆಯಾಜ್ಞೆ ಕೋರಿದ್ದಾರೆ. ಇದರ ವಿಚಾರಣೆ ನಾಳೆ (ಏಪ್ರಿಲ್ 20) ರಂದು ದೆಹಲಿ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ.
ಆರಾಧ್ಯ ಮೇಲೆ ಬಗ್ಗೆ ಸುದ್ದಿ ಪ್ರಸಾರ ಮಾಡಿದವರ ವಿರುದ್ಧ ಅಭಿಷೇಕ್ ಟ್ರೋಲ್ಗಳನ್ನು ಟೀಕಿಸಿದ್ರು. ಬಳಿಕ ಆರಾಧ್ಯ ಬಚ್ಚನ್ ಒಂದಲ್ಲ ಒಂದು ಕಾರಣಕ್ಕಾಗಿ ಟ್ರೋಲ್ಗಳಿಗೆ ಬಲಿಯಾಗುತ್ತಲೇ ಇದ್ದಾರೆ. ಬಾಬ್ ಬಿಸ್ವಾಸ್ ಪ್ರಚಾರದ ಸಮಯದಲ್ಲಿ, ಕೋಪಗೊಂಡ ಅಭಿಷೇಕ್ ತನ್ನ ಮಗಳ ಮೇಲೆ ಬಗ್ಗೆ ಟ್ರೋಲ್ ಮಾಡುವವರ ವಿರುದ್ಧ ವಾಗ್ದಾಳಿ ನಡೆಸಿದರು.
ಆರಾಧ್ಯ ಹೇರ್ಸ್ಟೈಲ್ ಒಂದೇ ರೀತಿ ಇದೆ, ಬದಲಾಗಿಲ್ಲ. ಈಗಲೂ ಆರಾಧ್ಯಾ ತಾಯಿ ಕೈ ಹಿಡಿದುಕೊಂಡೇ ಓಡಾಡುತ್ತಾರೆ ಎಂದು ಹೇಳಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


