ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ ಮಲ್ಹೋತ್ರಾ - ಕಿಯಾರಾ ಅಡ್ವಾಣಿ
ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ಮಂಗಳವಾರ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮೂಲಕ ಊಹಾಪೋಹಗಳಿಗೆ ಅಧಿಕೃತವಾಗಿ ತೆರೆ ಎಳೆದಿದ್ದಾರೆ.

ಜೈಸಲ್ಮೇರ್: ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ಮಂಗಳವಾರ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮೂಲಕ ಊಹಾಪೋಹಗಳಿಗೆ ಅಧಿಕೃತವಾಗಿ ತೆರೆ ಎಳೆದಿದ್ದಾರೆ.
ಇಂದು ಜೈಸಲ್ಮೇರ್‌ನ ಐಷಾರಾಮಿ ಸೂರ್ಯಗಢ ಪ್ಯಾಲೇಸ್ ಹೋಟೆಲ್ ನಲ್ಲಿ ನಡೆದ ಅದ್ಧೂರಿ ಮದುವೆ ಸಮಾರಂಭದಲ್ಲಿ ಆಪ್ತರು ಮತ್ತು ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ - ಕಿಯಾರಾ ಅಡ್ವಾಣಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ಬ್ಯಾಂಡ್ ಬಾಜಾ ಮತ್ತು ಬಾರಾತ್ ನೊಂದಿಗೆ ಹಿಂದೂ ಸಂಪ್ರದಾಯದಂತೆ ಸ್ಟಾರ್ ದಂಪತಿಗಳು ವಿವಾಹವಾದರು.
ದೆಹಲಿಯ ಪ್ರಸಿದ್ಧ 'ಜೀ' ವೆಡ್ಡಿಂಗ್ ಬ್ಯಾಂಡ್ ಮಂಗಳವಾರ ಸ್ಥಳಕ್ಕೆ ಆಗಮಿಸಿತ್ತು ಮತ್ತು ಸಿದ್ಧಾರ್ಥ್ ಸಾಂಪ್ರದಾಯಿಕ ಘೋಡಿಯಲ್ಲಿ ಸೂರ್ಯಘರ್ ಅರಮನೆ ರಾಯಲ್ ಎಂಟ್ರಿ ನೀಡಿದರು.
ಕರಣ್ ಜೋಹರ್, ಮನೀಶ್ ಮಲ್ಹೋತ್ರಾ, ಶಾಹಿದ್ ಕಪೂರ್, ಜೂಹಿ ಚಾವ್ಲಾ ಮತ್ತು ಮೀರಾ ರಜಪೂತ್ ಕಪೂರ್ ಸೇರಿದಂತೆ ಹಲವು ಗಣ್ಯರು ಸಿದ್ಧಾರ್ಥ್-ಕಿಯಾರಾ ಮದುವೆಯಲ್ಲಿ ಭಾಗವಹಿಸಿದ್ದರು.
ಸ್ಟಾರ್ ದಂಪತಿ ಖಾಸಗಿಯಾಗಿ ವಿವಾಹವಾಗಲು ಬಳಯಸಿದ್ದರಿಂದ ಮದುವೆ ಸಮಾರಂಭದ ಯಾವುದೇ ಫೋಟೋಗಳು ಅಥವಾ ವೀಡಿಯೊಗಳು ಮಾಧ್ಯಮಗಳಿಗೆ ಸೋರಿಕೆಯಾಗದಂತೆ ನೋಡಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


