ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ಮದುವೆ ಆಗಲು ನಾನ್ ರೆಡಿ ಎಂದ ಬಾಲಿವುಡ್ ನಟಿ ಪಾಯಲ್ ಘೋಷ್!
ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿ 2023ರ ಏಕದಿನ ವಿಶ್ವಕಪ್ನಲ್ಲಿ ಅತ್ಯಂತ ಯಶಸ್ವಿ ಬೌಲರ್ಗಳಲ್ಲಿ ಒಬ್ಬರಾಗಿ ಬೆಳೆಯುತ್ತಿದ್ದಾರೆ. ಅವರು ಪಂದ್ಯಾವಳಿಯಲ್ಲಿ ಕೇವಲ ನಾಲ್ಕು ಪಂದ್ಯಗಳಲ್ಲಿ 16 ವಿಕೆಟ್ಗಳನ್ನು ಪಡೆದಿದ್ದಾರೆ. ಇದೀಗ ಬಾಲಿವುಡ್ ನಟಿ ಪಾಯಲ್ ಘೋಷ್ ಅವರಿಂದ ಶಮಿಗೆ ಮದುವೆ ಆಫರ್ ಬಂದಿದೆ.

ಮುಂಬೈ: ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿ 2023ರ ಏಕದಿನ ವಿಶ್ವಕಪ್ನಲ್ಲಿ ಅತ್ಯಂತ ಯಶಸ್ವಿ ಬೌಲರ್ಗಳಲ್ಲಿ ಒಬ್ಬರಾಗಿ ಬೆಳೆಯುತ್ತಿದ್ದಾರೆ. ಅವರು ಪಂದ್ಯಾವಳಿಯಲ್ಲಿ ಕೇವಲ ನಾಲ್ಕು ಪಂದ್ಯಗಳಲ್ಲಿ 16 ವಿಕೆಟ್ಗಳನ್ನು ಪಡೆದಿದ್ದಾರೆ. ಇದೀಗ ಬಾಲಿವುಡ್ ನಟಿ ಪಾಯಲ್ ಘೋಷ್ ಅವರಿಂದ ಶಮಿಗೆ ಮದುವೆ ಆಫರ್ ಬಂದಿದೆ.
ಈ ಕುರಿತು ಟ್ವೀಟ್ ಮಾಡಿರುವ ಪಾಯಲ್ ಘೋಷ್, 'ಶಮಿ ತುಮ್ ಅಪ್ನಾ ಇಂಗ್ಲಿಷ್ ಸುಧಾರ್ಲೋ, ನಾನು ನಿನ್ನನ್ನು ಮದುವೆಯಾಗಲು ಸಿದ್ಧ' ಎಂದು ಬರೆದಿದ್ದಾರೆ.
ಪಾಯಲ್ ಘೋಷ್ 1992ರಲ್ಲಿ ಕೋಲ್ಕತ್ತಾದಲ್ಲಿ ಜನಿಸಿದರು ಮತ್ತು ಸೇಂಟ್ ಪಾಲ್ ಮಿಷನ್ ಶಾಲೆಯಲ್ಲಿ ಶಿಕ್ಷಣವನ್ನು ಪೂರ್ಣಗೊಳಿಸಿದರು. ಅವರು ಸ್ಕಾಟಿಷ್ ಚರ್ಚ್ ಕಾಲೇಜಿನಿಂದ ರಾಜಕೀಯ ವಿಜ್ಞಾನದಲ್ಲಿ ಪದವಿ ಪಡೆದಿದ್ದಾರೆ.
ಘೋಷ್ ಅವರು ‘ವರ್ಷಧಾರೆ’, ‘ಪ್ರಯಾಣಂ’, ‘ಊಸರವೇಲಿ’, ‘ಮಿ. ರಾಸ್ಕಲ್', ಮತ್ತು 'ಪಟೇಲ್ ಕಿ ಪಂಜಾಬಿ ಶಾದಿ' ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. 2020ರಲ್ಲಿ ಅವರು ರಾಮದಾಸ್ ಅಠಾವಳೆ ಅವರ ರಾಜಕೀಯ ಪಕ್ಷದ ಮಹಿಳಾ ವಿಭಾಗದ ಉಪಾಧ್ಯಕ್ಷರಾದರು.
ಮೊಹಮ್ಮದ್ ಶಮಿ 2014ರಲ್ಲಿ ಹಸಿನ್ ಜಹಾನ್ ಅವರನ್ನು ವಿವಾಹವಾದರು. 2015ರಲ್ಲಿ ದಂಪತಿಗೆ ಹೆಣ್ಣು ಮಗು ಜನಿಸಿತು. ಹಸಿನ್ ಶಮಿ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಮತ್ತು ಕೌಟುಂಬಿಕ ಹಿಂಸಾಚಾರದ ಆರೋಪದ ಮೇಲೆ ಪ್ರಕರಣ ದಾಖಲಿಸಿದರು. ಬಳಿಕ ಈ ವಿಚಾರ ತೀವ್ರ ಕಲಹಕ್ಕೆ ಕಾರಣವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


