ಬೆಟ್ಟಿಂಗ್ ಆ್ಯಪ್ ಪ್ರಕರಣ: ಬಾಲಿವುಡ್ ನಟ ರಣಬೀರ್ ಕಪೂರ್ ಗೆ ಇಡಿ ಸಮನ್ಸ್
ಛತ್ತೀಸ್ಗಢದ ಮಹದೇವ್ ಬೆಟ್ಟಿಂಗ್ ಆ್ಯಪ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣಬೀರ್ ಕಪೂರ್ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದ್ದು, ಶುಕ್ರವಾರ ವಿಚಾರಣೆಗೆ ಕರೆಸಿದೆ ಎಂದು...

ನವದೆಹಲಿ: ಛತ್ತೀಸ್ಗಢದ ಮಹದೇವ್ ಬೆಟ್ಟಿಂಗ್ ಆ್ಯಪ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣಬೀರ್ ಕಪೂರ್ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದ್ದು, ಶುಕ್ರವಾರ ವಿಚಾರಣೆಗೆ ಕರೆಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಕಳೆದ ತಿಂಗಳು ಮಹದೇವ್ ಆನ್ಲೈನ್ ಬೆಟ್ಟಿಂಗ್ ಪ್ರಕರಣ ಸಂಬಂಧಪಟ್ಟಂತೆ 417 ಕೋಟಿ ರೂಪಾಯಿ ವಶಕ್ಕೆ ಪಡೆಯಲಾಗಿದೆ ಎಂದು ಏಜೆನ್ಸಿಯೊಂದು ತನಿಖೆ ಮಾಡಿ ಹೇಳಿತ್ತು. ಈಗ ಈ ವಿಚಾರವಾಗಿ ನಟ ಬಾಲಿವುಡ್ ನಟ ರಣಬೀರ್ ಕಪೂರ್ಗೆ ಸಮನ್ಸ್ ಜಾರಿಗೊಳಿಸಲಾಗಿದೆ.
ಅಕ್ಟೋಬರ್ 6 ರಂದು ತನಿಖಾ ಸಂಸ್ಥೆಯ ರಾಯ್ಪುರ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ರಣಬೀರ್ ಕಪೂರ್ಗೆ ಸೂಚಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಪ್ರಕರಣದಲ್ಲಿ ಸುಮಾರು 14-15 ಸೆಲೆಬ್ರಿಟಿಗಳು ಮತ್ತು ನಟರನ್ನು ಸಹ ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ ಶೀಘ್ರದಲ್ಲೇ ಸಮನ್ಸ್ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಹೊಸ ಬಳಕೆದಾರರನ್ನು ನೋಂದಾಯಿಸಲು, ಐಡಿಗಳನ್ನು ರಚಿಸಲು ಮತ್ತು ಬೇನಾಮಿ ಬ್ಯಾಂಕ್ ಖಾತೆಗಳ ಲೇಯರ್ಡ್ ವೆಬ್ ಮೂಲಕ ಹಣ ವ್ಯವಹಾರ ನಡೆಸಲು ಈ ಆನ್ಲೈನ್ ಬುಕ್ ಬೆಟ್ಟಿಂಗ್ ಅಪ್ಲಿಕೇಶನ್ ಅನ್ನು ಬಳಸಲಾಗುತ್ತಿದೆ ಎಂದು ಏಜೆನ್ಸಿ ಆರೋಪಿಸಿದೆ.
ಈ ಆಪ್ನ ಅನೇಕ ಜಾಹೀರಾತುಗಳಲ್ಲಿ ರಣಬೀರ್ ಕಪೂರ್ ಅವರು ಕಾಣಿಸಿಕೊಂಡಿದ್ದು, ಈ ಸಂಬಂಧ ಅವರಿಗೆ ಸಿಕ್ಕಾಪಟ್ಟೆ ಹಣ ವರ್ಗಾವಣೆ ಆಗಿದೆ ಎಂದು ಹೇಳಲಾಗಿದೆ. ಹಾಗಾಗಿ ರಣಬೀರ್ ಕಪೂರ್ ಅವರನ್ನು ಅಕ್ಟೋಬರ್ 6 ರಂದು ವಿಚಾರಣೆ ಮಾಡೋದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


