ಬಾಬಾ ಸಿದ್ದಿಕಿಗೂ ಮೊದಲು, ಬಿಷ್ಣೋಯ್ ಗ್ಯಾಂಗ್ ಟಾರ್ಗೆಟ್ ಮಾಡಿದ್ದು ಸಲ್ಮಾನ್ ಖಾನ್, ನಟ ಜಸ್ಟ್ ಮಿಸ್ ಆಗಿದ್ದೇಗೆ?
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸಂಬಂಧಿಸಿದ ಶೂಟರ್‌ಗಳು ಸಲ್ಮಾನ್ ಖಾನ್ ಅವರ ಮುಂಬೈನ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ಬಳಿ ಹಲವಾರು ಬಾರಿ ರೆಕ್ಕಿ ನಡೆಸಿದ್ದರು. ಬಿಗಿ ಭದ್ರತೆಯಿಂದಾಗಿ ಅವರು ಸಲ್ಮಾನ್ ಮೇಲೆ ದಾಳಿ ಮಾಡುವ ಯೋಜನೆಯನ್ನು ರದ್ದುಗೊಳಿಸಿದರು.

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳು ತನಿಖೆ ವೇಳೆ ಮಹತ್ವದ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ. 'ದಬಾಂಗ್' ನಟ ಸಲ್ಮಾನ್ ಖಾನ್ ಕೂಡ ತಮ್ಮ ಹಿಟ್ ಲಿಸ್ಟ್ ನಲ್ಲಿದ್ದಾರೆ ಎಂದು ಆರೋಪಿಗಳು ವಿಚಾರಣೆ ವೇಳೆ ತಿಳಿಸಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸಂಬಂಧಿಸಿದ ಶೂಟರ್‌ಗಳು ಸಲ್ಮಾನ್ ಖಾನ್ ಅವರ ಮುಂಬೈನ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ಬಳಿ ಹಲವಾರು ಬಾರಿ ರೆಕ್ಕಿ ನಡೆಸಿದ್ದರು. ಬಿಗಿ ಭದ್ರತೆಯಿಂದಾಗಿ ಅವರು ಸಲ್ಮಾನ್ ಮೇಲೆ ದಾಳಿ ಮಾಡುವ ಯೋಜನೆಯನ್ನು ರದ್ದುಗೊಳಿಸಿದರು.
ಈ ಹಿಂದೆ ಲಾರೆನ್ಸ್ ಬಿಷ್ಣೋಯ್ ಟಿವಿ ಸಂದರ್ಶನವೊಂದರಲ್ಲಿ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ತನ್ನ ಜೀವನದ ಏಕೈಕ ಗುರಿ ಎಂದು ಹೇಳಿದ್ದರು. ನವೆಂಬರ್ 12ರಂದು ಮುಂಬೈ ಪೊಲೀಸರು ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಕ್ಕಾಗಿ ಕರ್ನಾಟಕದ 24 ವರ್ಷದ ಯುವಕನನ್ನು ಬಂಧಿಸಿದ್ದರು. ಆರೋಪಿಯ ಹೆಸರು ಸೊಹೈಲ್ ಪಾಷಾ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈ ಪೊಲೀಸರ ಪ್ರಕಾರ, ಪಾಷಾ ಪ್ರಸಿದ್ಧನಾಗಲು ಈ ಬೆದರಿಕೆ ಸಂದೇಶವನ್ನು ಕಳುಹಿಸಿದ್ದ. ಮಾಧ್ಯಮ ವರದಿಗಳ ಪ್ರಕಾರ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆಗಳು ಬಂದಿದ್ದವು. ವರ್ಲಿಯಲ್ಲಿರುವ ಮುಂಬೈ ಟ್ರಾಫಿಕ್ ಕಂಟ್ರೋಲ್ ರೂಂಗೆ ಕಳುಹಿಸಲಾದ ಸಂದೇಶದ ಮೂಲಕ ಈ ಬೆದರಿಕೆಯನ್ನು ಹಾಕಲಾಗಿತ್ತು.
ಡಿಸೆಂಬರ್ 4ರಂದು, ವ್ಯಕ್ತಿಯೊಬ್ಬರು ಸಲ್ಮಾನ್ ಖಾನ್ ಅವರ ಶೂಟಿಂಗ್ ಸೆಟ್‌ಗೆ ಏಕಾಏಕಿ ಪ್ರವೇಶಿಸಿದನು. ಭದ್ರತಾ ಸಿಬ್ಬಂದಿ ಆತನನ್ನು ತಡೆದಾಗ ನಾನು ಲಾರೆನ್ಸ್‌ಗೆ ಕರೆ ಮಾಡಬೇಕೇ? ಎಂದು ಬೆದರಿಕೆಯ ಧ್ವನಿಯಲ್ಲಿ ಹೇಳಿದನು. ಸೆಟ್‌ನಲ್ಲಿ ಗಲಾಟೆ ಸೃಷ್ಟಿಸಿದ ಶಂಕಿತನ ಬಗ್ಗೆಯೂ ಮಾಹಿತಿ ಬಹಿರಂಗವಾಗಿದೆ. ಆರೋಪಿಯ ಹೆಸರು ಸತೀಶ್ ವರ್ಮಾ. ಪೊಲೀಸರ ವಿಚಾರಣೆ ವೇಳೆ ತಾನೊಬ್ಬ ಜೂನಿಯರ್ ಆರ್ಟಿಸ್ಟ್ ಎಂದು ಹೇಳಿದ್ದಾನೆ. ಸದ್ಯ ಆತ ಪೊಲೀಸ್ ವಶದಲ್ಲಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



