ಪೂನಂ ಸಾವಿಗೆ ಗರ್ಭಕಂಠದ ಕ್ಯಾನ್ಸರ್ ಕಾರಣವಲ್ಲ: ಆಪ್ತ ಮೂಲಗಳು ಹೇಳೋದೇನು; ಸಾವಿನ ಸುತ್ತ ಅನುಮಾನದ ಹುತ್ತ!
ಗರ್ಭಕಂಠದ ಕ್ಯಾನ್ಸರ್‌ನಿಂದ ಮೃತಪಟ್ಟ ಪೂನಂ ಪಾಂಡೆ ಸಾವಿನ ಸುತ್ತ ಅನುಮಾನದ ಹುತ್ತ ದಟ್ಟವಾಗಿ ಬೆಳೆಯಲು ಆರಂಭವಾಗಿದೆ.

ಮುಂಬಯಿ: ಗರ್ಭಕಂಠದ ಕ್ಯಾನ್ಸರ್‌ನಿಂದ ಮೃತಪಟ್ಟ ಪೂನಂ ಪಾಂಡೆ ಸಾವಿನ ಸುತ್ತ ಅನುಮಾನದ ಹುತ್ತ ದಟ್ಟವಾಗಿ ಬೆಳೆಯಲು ಆರಂಭವಾಗಿದೆ.
ನಟಿಯ ನಿಧನ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟವಾದ ಬಳಿಕ ಇಲ್ಲಿಯವರೆಗೆ ಪೂನಂ ಪಾಂಡೆಯವರ ಯಾವುದೇ ಫೋಟೋ ಲಭ್ಯವಾಗಿಲ್ಲ. ಪೂನಂ ಪಾಂಡೆ ಅವರ ಮ್ಯಾನೇಜರ್ ಅವರನ್ನು ಕೇಳಿದರೆ ನಮಗೆ ಅವರ ಸಹೋದರಿ ಅವರಿಂದ ನಿಧನರಾದ ಸುದ್ದಿ ತಿಳಿದಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಖಚಿತ ಪಡಿಸಲು ಸಹೋದರಿ ಅವರಿಗೆ ಕರೆ ಮಾಡಿದರೆ ಅವರ ಮೊಬೈಲ್ ಸಂಖ್ಯೆ ಸ್ವಿಚ್ ಆಫ್ ಆಗಿದೆ.
ಪೂನಂ ಪಾಂಡೆ ಗರ್ಭಕಂಠ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ ಅನ್ನೋ ಸುದ್ದಿ ಆಘಾತ ತಂದಿತ್ತು. ಆದರೆ ಗರ್ಭಕಂಠ ಕ್ಯಾನ್ಸರ್‌ನಿಂದ ದೀಢೀರ್ ಸಾವು ಸಂಭವಿಸುವುದಿಲ್ಲ ಅನ್ನೋ ತಜ್ಞ ವೈದ್ಯರ ಮಾತುಗಳ ಬೆನ್ನಲ್ಲೇ ಪೂನಂ ಪಾಂಡೆ ಸಾವಿನ ಸುತ್ತ ಅನುಮಾನಗಳು ಮೂಡಿಸಿದೆ. ಪೂನಂ ಪಾಂಡೆ ಜೀವಂತ ವಾಗಿದ್ದಾರೆ ಅನ್ನೋ ಸುದ್ದಿ ಹರಿದಾಡುತ್ತಿದೆ. ಆದರೆ ಕೆಲ ವರದಿಗಳ ಪ್ರಕಾರ, ಪೂನಂ ಪಾಂಡೆ ಮೃತಪಟ್ಟಿರುವುದು ನಿಜ. ಆದರೆ ಗರ್ಭಕಂಠ ಕ್ಯಾನ್ಸರ್‌ನಿಂದ ಅಲ್ಲ, ಓವರ್ ಡೋಸ್ ಔಷಧಿಯಿಂದ ಮೃತಪಟ್ಟಿದ್ದಾರೆ ಎಂದು ವರದಿಗಳು ಹೇಳುತ್ತಿದೆ.
ಚಿಕಿತ್ಸೆ ವೇಳೆ ನೀಡಿದ ಔಷದಿ ಓವರ್ ಡೋಸ್‌ನಿಂದ ಪೂನಂ ಪಾಂಡೆ ಮೃತಪಟ್ಟಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಆದರೆ ಈ ಮಾಹಿತಿಗಳು ಅಧಿಕೃತವಾಗಿಲ್ಲ. ಯಾವ ಔಷಧಿ, ಯಾವ ಚಿಕಿತ್ಸೆ ಪಡೆಯುತ್ತಿದ್ದರೂ, ಪೂನಂ ಗರ್ಭಕಂಠ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದರೇ? ಅನ್ನೋದು ದೃಢಪಟ್ಟಿಲ್ಲ. ಡ್ರಗ್ಸ್ ಓವರ್ ಡೋಸ್ ನಿಂದ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ಟೈಮ್ಸ್ ನೌ ಪತ್ರಿಕೆ ವರದಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


