ನಟ ಮಿಥುನ್ ಚಕ್ರವರ್ತಿಗೆ ಎದೆನೋವು, ಆಸ್ಪತ್ರೆಗೆ ದಾಖಲು
ಖ್ಯಾತ ಬಾಲಿವುಡ್ ನಟ ಮಿಥುನ್ ಚಕ್ರವರ್ತಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋಲ್ಕತಾ: ಖ್ಯಾತ ಬಾಲಿವುಡ್ ನಟ ಮಿಥುನ್ ಚಕ್ರವರ್ತಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿರಿಯ ನಟ ಮತ್ತು ಬಿಜೆಪಿ ನಾಯಕ (BJP Leader) ಮಿಥುನ್ ಚಕ್ರವರ್ತಿ (Mithun Chakraborty) ಅವರಿಗೆ ದಿಢೀರ್ ಎದೆ ನೋವು (Chest Pain) ಕಾಣಿಸಿಕೊಂಡಿದ್ದು, ಶನಿವಾರ ಬೆಳಗ್ಗೆ ಮಿಥುನ್ ದಾ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ತೀವ್ರ ನಿಗಾಘಟಕದಲ್ಲಿ ಮಿಥುನ್ ಚಕ್ರವರ್ತಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.
ಮಿಥುನ್ ಚಕ್ರವರ್ತಿ ಅವರಿಗೆ ಇತ್ತೀಚೆಗೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿತ್ತು. ನಟ ಮತ್ತು ರಾಜಕಾರಣಿ ಮಿಥುನ್ ಅವರು ಈ ಬಗ್ಗೆ ಪೋಸ್ಟ್ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


