ನಟ ಮಿಥುನ್ ಚಕ್ರವರ್ತಿ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆ ಅಧಿಕಾರಿ
ಬಾಲಿವುಡ್ ಹಿರಿಯ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಕೋಲ್ಕತ್ತಾ: ಬಾಲಿವುಡ್ ಹಿರಿಯ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. 73 ವರ್ಷದ ಚಕ್ರವರ್ತಿ ಅವರಿಗೆ ಶನಿವಾರ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದರಿಂದ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಮಿಥುನ್ ಚಕ್ರವರ್ತಿ ಉತ್ತಮ ರೀತಿಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಸಂಪೂರ್ಣವಾಗಿ ಜ್ಞಾನ ಹೊಂದಿದ್ದು, ಮೃದುವಾದ ಆಹಾರವನ್ನು ಸೇವಿಸಿದ್ದಾರೆ. ಅವರನ್ನು ಡಿಸ್ಚಾರ್ಜ್ ಮಾಡುವ ಮೊದಲು ಕೆಲವು ಪರೀಕ್ಷೆಗಳಿಗೆ ಒಳಗಾಗುತ್ತಾರೆ ಎಂದು ವೈದ್ಯಕೀಯ ಸೌಲಭ್ಯ ನೀಡುತ್ತಿರುವ ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ: ನಟ ಮಿಥುನ್ ಚಕ್ರವರ್ತಿಗೆ ಎದೆನೋವು, ಆಸ್ಪತ್ರೆಗೆ ದಾಖಲು
ಜನಪ್ರಿಯ ನಟ ಈಗಾಗಲೇ ಆಸ್ಪತ್ರೆಯಲ್ಲಿ ಇತರ ವೈದ್ಯಕೀಯ ಪರೀಕ್ಷೆಗಳ ಜೊತೆಗೆ MRI ಗೆ ಒಳಗಾಗಿದ್ದಾರೆ. ದೇಶದ ರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿ ಪಡೆದಿರುವ ಚಕ್ರವರ್ತಿ ಹಿಂದಿ, ಬೆಂಗಾಲಿ, ಒಡಿಯಾ, ಭೋಜ್‌ಪುರಿ ಮತ್ತು ತಮಿಳು ಭಾಷೆಯಲ್ಲಿ ಸುಮಾರು 350 ಚಲನಚಿತ್ರಗಳಲ್ಲಿ ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


