ಕಿರುತೆರೆ ನಟ ರಿತು ರಾಜ್ ಸಿಂಗ್ ಹೃದಯಾಘಾತದಿಂದ ನಿಧನ
ವರದಿ ಪ್ರಕಾರ ರಿತುರಾಜ್ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪ್ಯಾಂಕ್ರಿಯಾಟಿಕ್ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಖ್ಯಾತ ಕಿರುತೆರೆ ನಟ ರಿತುರಾಜ್ ಸಿಂಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಟೈಮ್ಸ್ ನೌ ನ್ಯೂಸ್ ಪ್ರಕಾರ ಅವರ ಆಪ್ತ ಸ್ನೇಹಿತ ಮತ್ತು ನಟ ಅಮಿತ್ ಬೆಹ್ಲ್ ಅವರ ಸಾವನ್ನು ಖಚಿತಪಡಿಸಿದ್ದಾರೆ.
ವರದಿ ಪ್ರಕಾರ ರಿತುರಾಜ್ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪ್ಯಾಂಕ್ರಿಯಾಟಿಕ್ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಟ ಹೃದಯಾಘಾತದಿಂದ ನಿಧನರಾದರು. ಅವರು ಮೇದೋಜ್ಜೀರಕ ಗ್ರಂಥಿಯ ಚಿಕಿತ್ಸೆಗಾಗಿ ಕೆಲವು ಸಮಯದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆಮೇಲೆ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿ ಮನೆಗೆ ಮರಳಿದರು. ಆದರೆ ಕೆಲವು ಹೃದಯದ ತೊಂದರೆಗಳನ್ನು ಹೊಂದಿದ್ದರು. ಅದರಿಂದ ಅವರು ನಿಧನರಾಗಿದ್ದಾರೆಂದು ತಿಳಿದುಬಂದಿದೆ.

ಹಿರಿಯ ನಟಿ ಅಂಜನಾ ಭೌಮಿಕ್ ನಿಧನ
ಟ್ವಿಟರ್ನಲ್ಲಿ ನಟ ಅರ್ಷದ್ ವಾರ್ಸಿ ಹಿರಿಯ ನಟನ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ರಿತು ರಾಜ್ ನಿಧನರಾಗಿದ್ದಾರೆಂದು ತಿಳಿದು ನನಗೆ ತುಂಬಾ ದುಃಖವಾಗಿದೆ. ನಾವು ಅದೇ ಕಟ್ಟಡದಲ್ಲಿ ವಾಸಿಸುತ್ತಿದ್ದೆವು. ಅವರು ನಿರ್ಮಾಪಕರಾಗಿ ನನ್ನ ಮೊದಲ ಚಿತ್ರದ ಭಾಗವಾಗಿದ್ದರು. ಸ್ನೇಹಿತ ಮತ್ತು ಒಬ್ಬರನ್ನು ಒಳ್ಳೆಯ ವ್ಯಕ್ತಿಯನ್ನು ಕಳೆದುಕೊಂಡೆ. ಮಹಾನ್ ನಟ. ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ
ನಟ ಸಂದೀಪ್ ಸಿಕಂದ್ ಕೂಡ ಈ ಬಗ್ಗೆ ಮಾತನಾಡಿ ʻʻಸುದ್ದಿ ಕೇಳಿ ನಾನು ಆಘಾತಕ್ಕೊಳಗಾದೆ. ಯಾರೋ ಒಬ್ಬರು ನನ್ನ ವಾಟ್ಸ್ ಆ್ಯಪ್ ಗ್ರೂಪ್‌ಗಳಲ್ಲಿ ಬೆಳಿಗ್ಗೆಯೇ ಸುದ್ದಿಯನ್ನು ಪೋಸ್ಟ್ ಮಾಡಿದ್ದರು. ನೋಡಿ ಶಾಕ್ ಆದೆ. ನಾನು ʻಕಹಾನಿ ಘರ್ ಘರ್ ಕಿʼಯಲ್ಲಿ ರಿತು ಅವರೊಂದಿಗೆ ನಟಿಸಿದ್ದೆ. ಅದ್ಭುತ ನಟ. ನಟನಿಗಿಂತ ಹೆಚ್ಚಾಗಿ ಅವರು ಒಳ್ಳೆಯ ವ್ಯಕ್ತಿ. ಅವರ ಆತ್ಮಕ್ಕೆ ಶಾಂತಿ ಸಿಗಲಿʼʼಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


