ಅಮೀರ್ ಖಾನ್ ಪುತ್ರಿ ಇರಾ- ನೂಪುರ್ ಶಿಖರೆ ದಾಂಪತ್ಯ ಜೀವನಕ್ಕೆ ಪ್ರವೇಶ!
ಸೂಪರ್ ಸ್ಟಾರ್ ಅಮೀರ್ ಖಾನ್ ಮತ್ತು ನಿರ್ಮಾಪಕಿ ರೀನಾ ದತ್ತಾ ಅವರ ಪುತ್ರಿ ಇರಾ ಖಾನ್ ಬುಧವಾರ ತಮ್ಮ ಬಹುಕಾಲದ ಸಂಗಾತಿ ನೂಪುರ್ ಶಿಖರೆ ಅವರನ್ನು ವಿವಾಹವಾಗಿದ್ದಾರೆ.

ಮುಂಬೈ: ಸೂಪರ್ ಸ್ಟಾರ್ ಅಮೀರ್ ಖಾನ್ ಮತ್ತು ನಿರ್ಮಾಪಕಿ ರೀನಾ ದತ್ತಾ ಅವರ ಪುತ್ರಿ ಇರಾ ಖಾನ್ ಬುಧವಾರ ತಮ್ಮ ಬಹುಕಾಲದ ಸಂಗಾತಿ ನೂಪುರ್ ಶಿಖರೆ ಅವರನ್ನು ವಿವಾಹವಾಗಿದ್ದಾರೆ.
ಮಾನಸಿಕ ಆರೋಗ್ಯ ಬೆಂಬಲ ಸಂಸ್ಥೆಯ ಸಂಸ್ಥಾಪಕಿ ಮತ್ತು ಸಿಇಒ ಆಗಿರುವ ಇರಾ ಅವರು ಸೆಲೆಬ್ರಿಟಿ ಫಿಟ್‌ನೆಸ್ ತರಬೇತುದಾರರಾದ ನೂಪುರ್ ಅವರೊಂದಿಗೆ ಉಪನಗರ ಬಾಂದ್ರಾದಲ್ಲಿನ ಪಂಚತಾರಾ ಹೋಟೆಲ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಮದುವೆಯಲ್ಲಿ ಅಮೀರ್, ಅವರ ಮಾಜಿ ಪತ್ನಿಯರಾದ ರೀನಾ ದತ್ತಾ ಮತ್ತು ಕಿರಣ್ ರಾವ್ ಸೇರಿದಂತೆ ಅವರ ಕುಟುಂಬ ಸದಸ್ಯರು ಭಾಗವಹಿಸಿದ್ದರು. ಸಮಾರಂಭದ ನಂತರ ಅದೇ ಹೋಟೆಲ್‌ನಲ್ಲಿ ಆರತಕ್ಷತೆ ನಡೆಯಿತು. 26 ವರ್ಷದ ಇರಾ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದರು.
ಜನವರಿ 8 ರಂದು ಉದಯಪುರದಲ್ಲಿ ದಂಪತಿಗಳು ಮತ್ತೊಂದು ವಿವಾಹ ಸಮಾರಂಭವನ್ನು ನಡೆಸಲಿದ್ದಾರೆ, ನಂತರ ಜನವರಿ 13 ರಂದು ಮುಂಬೈನಲ್ಲಿ ಅದ್ಧೂರಿ ಆರತಕ್ಷತೆ ನಡೆಯಲಿದೆ. ಮೂರು ವರ್ಷಗಳಿಂದ ಸಂಬಂಧದಲ್ಲಿರುವ ಇರಾ ಮತ್ತು ನೂಪುರ್ ನವೆಂಬರ್ 2023 ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


