ಬಾಲಿವುಡ್

ಗೋಲ್ಡ್ ಸ್ಕೀಮ್ ವಂಚನೆ: ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ವಿರುದ್ಧ ತನಿಖೆಗೆ ಕೋರ್ಟ್ ಆದೇಶ

ಗೋಲ್ಡ್ ಸ್ಕೀಮ್ ನಲ್ಲಿ ಹೂಡಿಕೆದಾರರಿಗೆ ವಂಚಿಸಿದ ಆರೋಪ ಮೇಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ವಿರುದ್ಧ ತನಿಖೆ ನಡೆಸುವಂತೆ ಮುಂಬೈ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶಿಸಿದೆ.

ಗೋಲ್ಡ್ ಸ್ಕೀಮ್ ವಂಚನೆ: ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ವಿರುದ್ಧ ತನಿಖೆಗೆ ಕೋರ್ಟ್ ಆದೇಶ
ರಾಜ್ ಕುಂದ್ರಾ ಮತ್ತು ನಟಿ ಶಿಲ್ಪಾ ಶೆಟ್ಟಿ
Published On :

ಮುಂಬೈ: ಗೋಲ್ಡ್ ಸ್ಕೀಮ್ ನಲ್ಲಿ ಹೂಡಿಕೆದಾರರಿಗೆ ವಂಚಿಸಿದ ಆರೋಪ ಮೇಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ಹಾಗೂ ಇತರರ ವಿರುದ್ಧ ದಾಖಲಾಗಿರುವ ದೂರಿನ ಬಗ್ಗೆ ತನಿಖೆ ನಡೆಸುವಂತೆ ಮುಂಬೈ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶಿಸಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎನ್‌ಪಿ ಮೆಹ್ತಾ ಅವರು ಮಂಗಳವಾರ ಹೊರಡಿಸಿದ ಆದೇಶದಲ್ಲಿ, ಕುಂದ್ರಾ ದಂಪತಿ ಮಾಲೀಕತ್ವದ ಸತ್ಯುಗ್ ಗೋಲ್ಡ್ ಪ್ರೈವೇಟ್ ಲಿಮಿಟೆಡ್, ಅದರ ಇಬ್ಬರು ನಿರ್ದೇಶಕರು ಮತ್ತು ಉದ್ಯೋಗಿಗಳು ವಂಚನೆ ಎಸಗಿರುವುದು "ಪ್ರಾಥಮಿಕ ತನಿಖೆಯಿಂದ ದೃಢವಾಗಿದೆ". ಹೀಗಾಗಿ ರಿದ್ಧಿ ಸಿದ್ಧಿ ಬುಲಿಯನ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಪೃಥ್ವಿರಾಜ್ ಕೊಠಾರಿ ಅವರು ಸಲ್ಲಿಸಿರುವ ದೂರಿನ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಲಯವು ಬಿಕೆಸಿ ಪೊಲೀಸ್ ಠಾಣೆಗೆ ಸೂಚಿಸಿದೆ.

ವಂಚನೆಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ನ್ಯಾಯಾಧೀಶರು ಪೊಲೀಸರನ್ನು ಸೂಚಿಸಿದ್ದಾರೆ.

ಕುಂದ್ರಾ ದಂಪತಿ 2014 ರಲ್ಲಿ ಈ ಚಿನ್ನದ ಯೋಜನೆಯನ್ನು ಪ್ರಾರಂಭಿಸಿದ್ದಾರೆ. ಈ ಯೋಜನೆ ಅಡಿಯಲ್ಲಿ ಹೂಡಿಕೆ ಮಾಡಲು ಬಯಸುವ ಯಾರಾದರೂ ಅರ್ಜಿ ಸಲ್ಲಿಸುವ ಸಮಯದಲ್ಲಿ ರಿಯಾಯಿತಿ ದರದಲ್ಲಿ ಮುಂಗಡವಾಗಿ ಚಿನ್ನದ ಹಣವನ್ನು ಸಂಪೂರ್ಣವಾಗಿ ಪಾವತಿಸಬೇಕಾಗುತ್ತದೆ ಎಂದು ಕೊಠಾರಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.