ಮಗಳು ಮಾಲ್ತಿಯೊಂದಿಗೆ ಅಯೋಧ್ಯೆ ರಾಮ ಮಂದಿರಕ್ಕೆ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಸ್ ಭೇಟಿ
ನಟಿ ಪ್ರಿಯಾಂಕಾ ಚೋಪ್ರಾ ಜೊನಸ್ ಮತ್ತು ಅವರ ಪತಿ ಅಮೆರಿಕದ ಗಾಯಕ ನಿಕ್ ಜೋನಸ್ ಬುಧವಾರ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದಂಪತಿ ತಮ್ಮ ಎರಡು ವರ್ಷದ ಮಗಳು ಮಾಲ್ತಿ ಮೇರಿ ಜೋನಸ್ ಅನ್ನು ಕರೆತಂದಿದ್ದರು.

ಅಯೋಧ್ಯೆ: ನಟಿ ಪ್ರಿಯಾಂಕಾ ಚೋಪ್ರಾ ಜೊನಸ್ ಮತ್ತು ಅವರ ಪತಿ ಅಮೆರಿಕದ ಗಾಯಕ ನಿಕ್ ಜೋನಸ್ ಬುಧವಾರ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದಂಪತಿ ತಮ್ಮ ಎರಡು ವರ್ಷದ ಮಗಳು ಮಾಲ್ತಿ ಮೇರಿ ಜೋನಸ್ ಅನ್ನು ಕರೆತಂದಿದ್ದರು.
ಹಳದಿ ಸೀರೆಯುಟ್ಟಿದ್ದ ಪ್ರಿಯಾಂಕಾ ಮತ್ತು ಕುರ್ತಾ ಸೆಟ್ ಧರಿಸಿದ್ದ ನಿಕ್ ಅವರು ಪೂಜೆ ಸಲ್ಲಿಸಿದ ನಂತರ ದೇವಾಲಯದಲ್ಲಿ ಫೋಟೊಗೆ ಪೋಸ್ ನೀಡಿದರು. ಪೀಚ್ ಬಣ್ಣದ ಉಡುಪನ್ನು ಧರಿಸಿದ್ದ ಮಾಲ್ತಿಯನ್ನು ನಟಿ ಪ್ರಿಯಾಂಕಾ ತಮ್ಮ ಕಂಕುಳಲ್ಲಿ ಎತ್ತಿಕೊಂಡಿದ್ದರು.
ದೇವಾಲಯದ ಅರ್ಚಕರು ಮತ್ತು ಅವರ ಭದ್ರತಾ ಸಿಬ್ಬಂದಿ ಪ್ರಿಯಾಂಕಾ ಮತ್ತು ಅವರ ಪತಿ ಹಾಗೂ ಮಗಳೊಂದಿಗೆ ಫೋಟೊ ತೆಗೆಸಿಕೊಂಡರು.
ಇದಕ್ಕೂ ಮುನ್ನ, ಪ್ರಿಯಾಂಕಾ ಮತ್ತು ನಿಕ್ ತಮ್ಮ ಮಗಳೊಂದಿಗೆ ಅಯೋಧ್ಯೆ ವಿಮಾನ ನಿಲ್ದಾಣದಿಂದ ಕಾರನ್ನೇರಿ ಹೊರಟಿದ್ದರು. ಜನವರಿಯಲ್ಲಿ ನಡೆದ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಯ ನಂತರ ಇದು ಅವರ ಮೊದಲ ಭೇಟಿಯಾಗಿದೆ.
ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್ ನಟ ಅಮಿತಾಭ್ ಬಚ್ಚನ್, ರಜನಿಕಾಂತ್, ಆಲಿಯಾ ಭಟ್-ರಣಬೀರ್ ಕಪೂರ್, ವಿಕ್ಕಿ ಕೌಶಲ್-ಕತ್ರಿನಾ ಕೈಫ್ ಮತ್ತು ರಿಷಬ್ ಶೆಟ್ಟಿ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಉಪಸ್ಥಿತರಿದ್ದರು.
ಪ್ರಿಯಾಂಕಾ ಮಂಗಳವಾರ ಮುಂಬೈನಲ್ಲಿ ನಡೆದ ಪ್ರೈಮ್ ವಿಡಿಯೋ ಪ್ರೆಸೆಂಟ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅಲ್ಲಿ ಅವರು ತಮ್ಮ ಮುಂಬರುವ ನಿರ್ಮಾಣದ 'ವುಮೆನ್ ಆಫ್ ಮೈ ಬಿಲಿಯನ್' ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


