6 ಅಂತಸ್ತಿನ ಕಟ್ಟಡದಿಂದ ಜಿಗಿದು ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆ
ಮಲೈಕಾ 11 ವರ್ಷದವರಿದ್ದಾಗ ಅವರ ಷೋಷಕರು ವಿಚ್ಛೇದನ ಪಡೆದಿದ್ದರು. ಬಳಿಕ ಮಲೈಕಾ ತಾಯಿ ಜಾಯ್ಸ್ ಪಾಲಿಕಾರ್ಪ್, ಸಹೋದರಿ ಅಮೃತಾ ಅರೋರಾ ಅವರೊಂದಿಗೆ ವಾಸವಾಗಿದ್ದರು.

ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಬುಧವಾರ ತಿಳಿದುಬಂದಿದೆ.
ಮಲೈಕಾ ಅವರ ತಂದೆ ಅನಿಲ್ ಅರೋರಾ ಅವರು, 6 ಅಂತಸ್ತಿನ ಕಟ್ಟಡದ ಮೇಲಿಂದ ಕೆಳಗೆ ಜಿಗಿದು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಸುದ್ದಿ ತಿಳಿದ ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆ ಮಾಡಿಕೊಂಡಿರೋದನ್ನು ಖಚಿತಪಡಿಸಿದ್ದಾರೆ. ಆದರೆ ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಹೇಳಲಾಗುತ್ತಿದೆ.
ಮಲೈಕಾ 11 ವರ್ಷದವರಿದ್ದಾಗ ಅವರ ಷೋಷಕರು ವಿಚ್ಛೇದನ ಪಡೆದಿದ್ದರು. ಬಳಿಕ ಮಲೈಕಾ ತಾಯಿ ಜಾಯ್ಸ್ ಪಾಲಿಕಾರ್ಪ್, ಸಹೋದರಿ ಅಮೃತಾ ಅರೋರಾ ಅವರೊಂದಿಗೆ ವಾಸವಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



