ಬಾಲಿವುಡ್

'ಮಲೈಕಾ ತಂದೆ ಕಟ್ಟಡದಿಂದ ಜಿಗಿಯಲಿಲ್ಲ, ಇದೊಂದು ಆಕಸ್ಮಿಕ ಘಟನೆ'

ಅನಿಲ್ ಅರೋರಾ ಅವರು ಬಾಂದ್ರಾ ಪ್ರದೇಶದ ಕಟ್ಟಡವೊಂದರ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು.

'ಮಲೈಕಾ ತಂದೆ ಕಟ್ಟಡದಿಂದ ಜಿಗಿಯಲಿಲ್ಲ, ಇದೊಂದು ಆಕಸ್ಮಿಕ ಘಟನೆ'
ಕುಟಂಬದ ಜತೆ ಅನಿಲ್ ಅರೋರಾ
Published On :

ಮುಂಬೈ: ಬಾಲಿವುಡ್ ನಟಿ ಹಾಗೂ ಮಾಡೆಲ್ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಅವರು ಬುಧವಾರ ಬೆಳಗ್ಗೆ ಮುಂಬೈನ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆಕಸ್ಮಿಕವಾಗಿ ಬಿದ್ದು ಅವಘಡ ಸಂಭವಿಸಿದೆ ಎನ್ನಲಾಗಿದೆ.

ಈ ಮುಂಚೆ ಅನಿಲ್ ಅರೋರಾ ಅವರು ಬಾಂದ್ರಾ ಪ್ರದೇಶದ ಕಟ್ಟಡವೊಂದರ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು.

ಘಟನೆಯ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ, ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಏತನ್ಮಧ್ಯೆ, "ಮಲೈಕಾ ಅವರ ತಂದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿಲ್ಲ. ಇದೊಂದು ಅಪಘಾತವಾಗಿದೆ. ಅವರಿಗೆ ಯಾವುದೇ ಕಾಯಿಲೆ ಇಲ್ಲ. ಈ ಘಟನೆಯಿಂದ ಎಲ್ಲರೂ ಆಘಾತಕ್ಕೊಳಗಾಗಿದ್ದಾರೆ" ಪೊಲೀಸ್ 'ಪಂಚನಾಮೆಯಿಂದ' ವಿಷಯ ಸ್ಪಷ್ಟವಾಗಲಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.