ಬಾಲಿವುಡ್

‘ಅಬೀರ್ ಗುಲಾಲ್’ ಸಿನಿಮಾಗೆ ನಿಷೇಧ: BAN ಮಾಡೋಕೆ ಅದೇನು ನೀಲಿಚಿತ್ರವೇ?; ಪ್ರಕಾಶ್ ರಾಜ್ ಕಿಡಿ

ನೀಲಿಚಿತ್ರ ಅಥವಾ ಮಕ್ಕಳ ಮೇಲಿನ ದೌರ್ಜನ್ಯದ ಬಗ್ಗೆ ಸಿನಿಮಾ ಅಲ್ಲ ಅಂದ್ಮೇಲೆ ನೀವು ಯಾವುದೇ ಚಿತ್ರವನ್ನು ನಿಷೇಧಿಸಲು ಸಾಧ್ಯವಿಲ್ಲ.

‘ಅಬೀರ್ ಗುಲಾಲ್’ ಸಿನಿಮಾಗೆ ನಿಷೇಧ: BAN ಮಾಡೋಕೆ ಅದೇನು ನೀಲಿಚಿತ್ರವೇ?; ಪ್ರಕಾಶ್ ರಾಜ್ ಕಿಡಿ
ಸಂಗ್ರಹ ಚಿತ್ರ
Published On :

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ದುರಂತ ಪಹಲ್ಗಾಮ್ ಭಯೋತ್ಪಾದನಾ ಘಟನೆಯ ಹಿನ್ನೆಲೆಯಲ್ಲಿ ಪಾಕಿಸ್ತಾನಿ ನಟ ಫವಾದ್ ಖಾನ್ ಮತ್ತು ವಾಣಿ ಕಪೂರ್ ಅವರ 'ಅಬೀರ್ ಗುಲಾಲ್' ಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲು ನಿಷೇಧ ಹೇರಿರುವುದಕ್ಕೆ ನಟ ಪ್ರಕಾಶ್ ರಾಜ್ ಅವರು ಕಿಡಿಕಾರಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ವಿವಾದಾತ್ಮಕ ವಿಷಯಗಳನ್ನು ಹೊಂದಿರುವ ಚಲನಚಿತ್ರಗಳು ಸೇರಿದಂತೆ ಯಾವುದೇ ಸಿನಿಮಾ ನಿಷೇಧಿಸುವುದನ್ನು ನಾನು ವಿರೋಧಿಸುತ್ತೇನೆ. ನೀಲಿಚಿತ್ರ ಅಥವಾ ಮಕ್ಕಳ ಮೇಲಿನ ದೌರ್ಜನ್ಯದ ಬಗ್ಗೆ ಸಿನಿಮಾ ಅಲ್ಲ ಅಂದ್ಮೇಲೆ ನೀವು ಯಾವುದೇ ಚಿತ್ರವನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಜನರು ಎಲ್ಲಾ ಚಲನಚಿತ್ರಗಳನ್ನು ವೀಕ್ಷಿಸಲು ಮತ್ತು ತಮ್ಮದೇ ಆದ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸ್ವಾತಂತ್ರ್ಯವನ್ನು ಹೊಂದಿರಬೇಕು ಎಂದು ತಿಳಿಸಿದರು.

‘ಅಬೀರ್ ಗುಲಾಲ್’ ಮೇ 9ಕ್ಕೆ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಅದಕ್ಕೀಗ ಭಾರತದಲ್ಲಿ ಬ್ರೇಕ್ ಬಿದ್ದಿದೆ. ಫವಾದ್ ಖಾನ್‌ಗೆ ನಾಯಕಿಯಾಗಿ ಬಾಲಿವುಡ್ ಬೆಡಗಿ ವಾಣಿ ಕಪೂರ್ ನಟಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.