ದಿವಂಗತ ಆಶಾ ಭೋಸ್ಲೆ ಸ್ಮರಿಸಿದ WWE ತಾರೆ John Cena
ಇತ್ತೀಚೆಗೆ ನಿಧನರಾದ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರಿಗೆ ಖ್ಯಾತ ಬಾಲಿವುಡ್ ನಟ, WWE ಮಾಜಿ ರೆಸ್ಲರ್ ಜಾನ್ ಸೀನಾ ಕಂಬನಿ ಮಿಡಿದಿದ್ದಾರೆ.

ನವದೆಹಲಿ: ಖ್ಯಾತ ಬಾಲಿವುಡ್ ನಟ, WWE ಮಾಜಿ ರೆಸ್ಲರ್ ಜಾನ್ ಸೀನಾ ಭಾರತದ ಸಂಗೀತ ದಂತಕಥೆ ಗಾಯಕಿ ಆಶಾ ಭೋಸ್ಲೆ ಅವರಿಗೆ ಗೌರವ ಸಲ್ಲಿಸಿದ್ದಾರೆ.
ಇತ್ತೀಚೆಗೆ ನಿಧನರಾದ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರಿಗೆ ಖ್ಯಾತ ಬಾಲಿವುಡ್ ನಟ, WWE ಮಾಜಿ ರೆಸ್ಲರ್ ಜಾನ್ ಸೀನಾ ಕಂಬನಿ ಮಿಡಿದಿದ್ದಾರೆ.
ಜಾನ್ ಸೀನಾ ತಮ್ಮ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ದಿವಂಗತ ಗಾಯಕಿಯ ಚಿತ್ರವನ್ನು ಹಂಚಿಕೊಂಡು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಆಶಾ ಭೋಸ್ಲೆ ವೇದಿಕೆಯಲ್ಲಿ ಪ್ರದರ್ಶನ ನೀಡುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.
ಈ ಪೋಸ್ಟ್ ಗೆ ಅವರ ಸಹನಟಿ ಪ್ರಿಯಾಂಕಾ ಚೋಪ್ರಾ ಜೋನಾಸ್ ಕೂಡ ರಿಟ್ವೀಟ್ ಮಾಡಿದ್ದು, ಪೋಸ್ಟ್ ಅಡಿಯಲ್ಲಿ ಕ್ವೀನ್ ಎಂದು ಕಾಮೆಂಟ್ ಮಾಡಿದ್ದಾರೆ.
ಆಶಾ ಭೋಸ್ಲೆ ಅವರು ಭಾನುವಾರ ತಮ್ಮ 92 ನೇ ವಯಸ್ಸಿನಲ್ಲಿ ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು. ಸೋಮವಾರ ಮುಂಬೈನಲ್ಲಿ ಅವರ ಅಂತ್ಯಕ್ರಿಯೆ ನಡೆಯಿತು ಮತ್ತು ದಿವಂಗತ ಗಾಯಕಿಗೆ ಗೌರವ ಸಲ್ಲಿಸಲು ವಿವಿಧ ಉದ್ಯಮಗಳ ಗಣ್ಯರು ಆಗಮಿಸಿದ್ದರು.
ಭಾರತೀಯ ಹಿನ್ನೆಲೆ ಗಾಯನದಲ್ಲಿ ಶ್ರೇಷ್ಠ ಹೆಸರುಗಳಲ್ಲಿ ಒಬ್ಬರಾದ ಭೋಸ್ಲೆ ಎಂಟು ದಶಕಗಳ ಕಾಲ ತಮ್ಮ ವೃತ್ತಿಜೀವನದಲ್ಲಿ 20 ಭಾಷೆಗಳಲ್ಲಿ 12,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ದಾಖಲೆ ಸೃಷ್ಟಿಸಿದ್ದಾರೆ. ಅವರಿಗೆ 2000 ದಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು 2008 ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



