ಧುರಂಧರ-2 ಗೆಲುವಿನ ಬೆನ್ನಲ್ಲೇ ಮತ್ತೊಂದು'ಗುಡ್ ನ್ಯೂಸ್' ನೀಡಿದ ರಣವೀರ್ ಸಿಂಗ್, ದೀಪಿಕಾ ಪಡುಕೋಣೆ!
ತಾರಾ ದಂಪತಿ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಜಂಟಿ ಪೋಸ್ಟ್ ಮೂಲಕ ಈ ವಿಷಯವನ್ನು ಹಂಚಿಕೊಂಡಿದ್ದಾರೆ.

ಧುರಂಧರ 2 ಗೆಲುವಿನ ಅಲೆಯಲ್ಲಿ ತೇಲುತ್ತಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಭಾನುವಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ.
ತಾರಾ ದಂಪತಿ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಜಂಟಿ ಪೋಸ್ಟ್ ಮೂಲಕ ಈ ವಿಷಯವನ್ನು ಹಂಚಿಕೊಂಡಿದ್ದಾರೆ.
ಇನ್ಸ್ಟಾಗ್ರಾಮ್ ನಲ್ಲಿ ಅವರ ಪುತ್ರಿ ದುವಾ ಪಾಸಿಟಿವ್ ಎಂದು ತೋರಿಸುವ ಪ್ರೆಗ್ನೆನ್ಸಿ ಟೆಸ್ಟ್ ಕಿಟ್ ಹಿಡಿದಿರುವುದನ್ನು ತೋರಿಸಲಾಗಿದೆ. ಎರಡು ದುಷ್ಟ ಕಣ್ಣಿನ ಎಮೋಟಿಕಾನ್ಗಳನ್ನು ಪೋಸ್ಟ್ ಮಾಡಿದ್ದಾರೆ.
ದೀಪಿಕಾ ಮತ್ತು ರಣವೀರ್ ಸಿಂಗ್ ಸಂಬಂಧ: ದೀಪಿಕಾ ಮತ್ತು ರಣವೀರ್ ನವೆಂಬರ್ 14, 2018 ರಂದು ಇಟಲಿಯ ಲೇಕ್ ಕೊಮೊದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ವಿವಾಹವಾದರು.
2013 ರಲ್ಲಿ 'ಗೋಲಿಯೋಂ ಕಿ ರಾಸಲೀಲಾ ರಾಮ್-ಲೀಲಾ' ಚಿತ್ರದ ಸೆಟ್ ನಲ್ಲಿ ಅವರಿಬ್ಬರ ನಡುವೆ ಪ್ರೀತಿ ಶುರುವಾಗಿತ್ತು. ಬಳಿಕ ಹಲವು ವರ್ಷಗಳ ಕಾಲ ಡೇಟಿಂಗ್ ಮಾಡಿದ ನಂತರ, 2015 ರಲ್ಲಿ ರಹಸ್ಯವಾಗಿ ನಿಶ್ಚಿತಾರ್ಥ ಮಾಡಿಕೊಂಡು, 2018 ರಲ್ಲಿ ಮದುವೆಯಾದರು.
ದೀಪಿಕಾ ಮತ್ತು ರಣವೀರ್ ಸಿಂಗ್ ಸೆಪ್ಟೆಂಬರ್ 8, 2024 ರಂದು ತಮ್ಮ ಮೊದಲ ಮಗು ದುವಾ ಜನಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



