ಕ್ರಿಕೆಟ್ ದಂತಕಥೆ ಸಚಿನ್ ಪುತ್ರಿ ಸಾರಾ ತೆಂಡೂಲ್ಕರ್ ಫೇಕ್ AI ವಿಡಿಯೋ ವೈರಲ್! ನೆಟ್ಟಿಗರ ತೀವ್ರ ಕಳವಳ
ಎಕ್ಸ್ ನಲ್ಲಿ ಹಂಚಿಕೊಂಡ ಈ ವಿಡಿಯೋದಲ್ಲಿ ಸಾರಾ ತೆಂಡೂಲ್ಕರ್ ಸಂಪೂರ್ಣವಾಗಿ ವಿಭಿನ್ನವಾದ ಉಡುಪನ್ನು ಧರಿಸಿರುವುದು ಕಂಡುಬಂದಿದೆ. Instagram ವೀಡಿಯೊವನ್ನು AI ಬಳಸಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಭಾರತದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೊಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಅವರ ಫೇಕ್ AI ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. AI ಬಳಸಿಕೊಂಡು ಮಾಡಲಾಗಿರುವ ಈ ಕ್ಲಿಪ್ ಎಂದು ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.
ಇನ್ಸ್ಟಾಗ್ರಾಮ್ನಲ್ಲಿ ಪ್ರಸಾರವಾದ ಈ ವಿಡಿಯೋದಲ್ಲಿ, ಮನೆಯಿಂದ ಹೊರಬಂದ ಸಾರಾ ತೆಂಡೊಲ್ಕರ್, ಕಾರಿನಿಂದ ನಡೆದುಹೋಗುತ್ತಿದ್ದಾಗ ಸುತ್ತುವರೆದ ಪಾಪಾರಾಜಿಗಳಿಗೆ ಬಾಯ್ ಮಾಡುವುದು ಸೆರೆಯಾಗಿದೆ. ಆದರೆ, ಮತ್ತೊಬ್ಬ ಸಾಮಾಜಿಕ ಮಾಧ್ಯಮ ಬಳಕೆದಾರರ ಅದೇ ಕ್ಲಿಪ್ನ ಮೂಲ (Original) ಎಂದು ಹೇಳಲಾದದ್ದನ್ನು ಹಂಚಿಕೊಂಡ ನಂತರ ವೀಡಿಯೊದ ಸತ್ಯಾಸತ್ಯತೆಯ ಬಗ್ಗೆ ಪ್ರಶ್ನೆಗಳು ಹುಟ್ಟಿಕೊಂಡಿವೆ.
ಎಕ್ಸ್ ನಲ್ಲಿ ಹಂಚಿಕೊಂಡ ಈ ವಿಡಿಯೋದಲ್ಲಿ ಸಾರಾ ತೆಂಡೂಲ್ಕರ್ ಸಂಪೂರ್ಣವಾಗಿ ವಿಭಿನ್ನವಾದ ಉಡುಪನ್ನು ಧರಿಸಿರುವುದು ಕಂಡುಬಂದಿದೆ. Instagram ವೀಡಿಯೊವನ್ನು AI ಬಳಸಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಪೋಸ್ಟ್ ಮಾಡುವ ಮುನ್ನ 4.9 ಮಿಲಿಯನ್ ಅನುಯಾಯಿಗಳು, ಇನ್ನೂ ಕೆಲವರು ಸರಿಯಾಗಿ ಪರಿಶೀಲನೆ ನಡೆಸಲಿಲ್ಲವೇ? ಅದು ನಿರಾಶಾದಾಯಕವಾಗಿದೆ" ಎಂದು ಪೋಸ್ಟ್ ನಲ್ಲಿ ಬರೆಯಲಾಗಿದೆ. ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು AI ದುರ್ಬಳಕೆ ಕುರಿತು ಚರ್ಚಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



