61ನೇ ವಯಸ್ಸಿನಲ್ಲೂ ಏನು ಎನರ್ಜಿ! ಮಿಸ್ಟರ್ ಅಂಡ್ ಮಿಸೆಸ್ ಆಗುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಆಮೀರ್ ಖಾನ್, ಗೌರಿ ಸ್ಪ್ರಾಟ್! Video
ಮದುವೆಯ ಮೊದಲ ಫೋಟೋಗಳು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರ್ತಿದೆ.

ಬಾಲಿವುಡ್ ನಟ ಆಮೀರ್ ಖಾನ್ 61 ವಯಸ್ಸಿನಲ್ಲಿ ಮೂರನೇ ಮದುವೆಯಾಗಿದ್ದಾರೆ. ಕುಟುಂಬದ ಸದಸ್ಯರು ಮತ್ತು ಅತ್ಯಂತ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಉದ್ಯಮಿ ಗೌರಿ ಸ್ಪ್ಯ್ರಾಟ್ ಅವರನ್ನು ಅಧಿಕೃತವಾಗಿ ವಿವಾಹವಾಗಿದ್ದಾರೆ.
ಮದುವೆಯ ಮೊದಲ ಫೋಟೋಗಳು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರ್ತಿದೆ.
ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಅವರು ಆಮೀರ್ ಖಾನ್ ಮತ್ತು ಗೌರಿ ಸ್ಪ್ರಾಟ್ ಅವರ ವಿವಾಹದ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೊದಲ್ಲಿ ನೂತನ ದಂಪತಿ ತಮ್ಮ ಕುಟುಂಬದವರೊಂದಿಗೆ ಸೇರಿ ಡ್ಯಾನ್ಸ್ ಮಾಡಿದ್ದಾರೆ. ಈ ವೇಳೆ ಆಮೀರ್ ಖಾನ್, ಗೌರಿಯನ್ನು ತಬ್ಬಿಕೊಂಡು ಚುಂಬಿಸುವುದು ವಿಡಿಯೋದಲ್ಲಿದೆ.
ಪ್ರಿಯ ಆಮೀರ್ ಭಾಯ್ ಮತ್ತು ಗೌರಿ, ನಿಮ್ಮ ವಿವಾಹಕ್ಕೆ ಹೃತ್ಪೂರ್ವಕ ಅಭಿನಂದನೆಗಳು! ನಿಮ್ಮಿಬ್ಬರ ಜೀವನ ಪ್ರೀತಿ, ಸಂತೋಷ, ನಗುವಿಂದ ಕೂಡಿರಲಿ. ಅಲ್ಲಾಹನು ಆಶೀರ್ವದಿಸಲಿ ಎಂದು ಇರ್ಫಾನ್ ಪಠಾಣ್ ಬರೆದುಕೊಂಡಿದ್ದಾರೆ.
ಆಮೀರ್ ಖಾನ್ ಅವರ ಮೂವರು ಮಕ್ಕಳು ಮತ್ತು ಗೌರಿ ಸ್ಪ್ರಾಟ್ ಅವರ ಮಗ ಮದುವೆಯಲ್ಲಿ ಹಾಜರಿದ್ದರು. ಆಮೀರ್ ಖಾನ್ ಮೊದಲಿಗೆ ರೀನಾ ದತ್ತಾ ಅವರನ್ನು ವಿವಾಹವಾಗಿದ್ದರು. ಅವರಿಗೆ ಜುನೈದ್ ಮತ್ತು ಇರಾ ಖಾನ್ ಎಂಬ ಇಬ್ಬರು ಮಕ್ಕಳಿದ್ದಾರೆ.
ಬಳಿಕ 2005ರಲ್ಲಿ ನಿರ್ದೇಶಕಿ ಕಿರಣ್ ರಾವ್ ಅವರೊಂದಿಗೆ ವಿವಾಹವಾಗಿತ್ತು. 2021 ರಲ್ಲಿ ಈ ಜೋಡಿ ಬೇರ್ಪಟ್ಟು, ಅವರ ಮಗ ಆಜಾದ್ ನ ಸಹ-ಪೋಷಕರಾಗಿ ಮುಂದುವರಿಸಿದ್ದಾರೆ. ಗೌರಿ ಸ್ಪ್ರಾಟ್ ಗೆ ಒಬ್ಬ ಮಗನಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



