ಬಾಲಿವುಡ್

CJP ಪ್ರತಿಭಟನೆ: ಫ್ಯಾನ್ಸ್ ಕೆಂಗಣ್ಣಿಗೆ ಗುರಿ ಆದ ಸೋನು ನಿಗಮ್, ಶೋ ಬಹಿಷ್ಕಾರಕ್ಕೆ ಕರೆ! Video

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದ ವಿದ್ಯಾರ್ಥಿಗಳ ನೇತೃತ್ವದ ಹೋರಾಟದ ಬಗ್ಗೆ ವರದಿಗಾರರು ಸೋನು ನಿಗಮ್ ಅವರ ಅಭಿಪ್ರಾಯಗಳನ್ನು ಕೇಳಿದ ವಿಡಿಯೋ ಇದಾಗಿದೆ.

CJP ಪ್ರತಿಭಟನೆ: ಫ್ಯಾನ್ಸ್ ಕೆಂಗಣ್ಣಿಗೆ ಗುರಿ ಆದ ಸೋನು ನಿಗಮ್, ಶೋ ಬಹಿಷ್ಕಾರಕ್ಕೆ ಕರೆ! Video
ಸೋನು ನಿಗಮ್
Published On :

NEET ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿನ ಪ್ರತಿಭಟನೆ ವಿಚಾರದಲ್ಲಿ ಬಾಲಿವುಡ್ ಖ್ಯಾತ ಗಾಯಕ ಸೋನು ನಿಗಮ್ ಇದೀಗ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸೋನು ನಿಗಮ್ ಜೊತೆಗಿನ ಕಿರು ಸಂವಾದದ ವಿಡಿಯೋವೊಂದು ಆನ್‌ಲೈನ್‌ನಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ದೆಹಲಿಯಲ್ಲಿ ಸಿಜೆಪಿ ನೇತೃತ್ವದ ನೀಟ್ ಪ್ರತಿಭಟನೆ ಕುರಿತ ಪ್ರಶ್ನೆಗಳಿಗೆ ಗಾಯಕ ಪ್ರತಿಕ್ರಿಯಿಸಿಲ್ಲ. ಈ ವಿಡಿಯೋ ಕೆಲವೇ ಗಂಟೆಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಕಿಡಿಕಾರಿದ್ದಾರೆ. ಅಲ್ಲದೇ, ಪ್ರಮುಖ ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಸೆಲೆಬ್ರಿಟಿಗಳು ಮಾತನಾಡಬೇಕೇ ಎಂಬ ಬಗ್ಗೆ ಚರ್ಚೆಗಳನ್ನು ಹುಟ್ಟುಹಾಕಿದೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದ ವಿದ್ಯಾರ್ಥಿಗಳ ನೇತೃತ್ವದ ಹೋರಾಟದ ಬಗ್ಗೆ ವರದಿಗಾರರು ಸೋನು ನಿಗಮ್ ಅವರ ಅಭಿಪ್ರಾಯಗಳನ್ನು ಕೇಳಿದ ವಿಡಿಯೋ ಇದಾಗಿದೆ.

ಸೋನು ನಿಗಮ್ ಈ ಪ್ರಶ್ನೆಗಳಿಗೆ ಉತ್ತರಿಸುವ ಬದಲು,ಪ್ರಸ್ತುತ ಈ ವಿಚಾರದ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ. ಹೇಳಿಕೆಗಾಗಿ ಪತ್ರಕರ್ತರು ಒತ್ತಾಯಿಸಿದರೂ ಸೋನು ನಿರಾಶೆಗೊಂಡಂತೆ ಕಂಡುಬಂದಿದ್ದು, "ಅಭಿ ಹೋ ಗಯಾ, ಬಸ್" ಎಂದು ಹೇಳುವ ಮೂಲಕ ಮಾತನಾಡಲು ನಿರಾಕರಿಸಿದ್ದಾರೆ. ನಂತರ ("Main yahan kisliye aaya hoon. Bas bas) ಎಂದು ಹೇಳಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರು ನಾನಾ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಕೆಲವರು ಅವರ ಶೋ ಬಹಿಷ್ಕಾರಕ್ಕೆ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.