video: ಕರ್ನಾಟಕಕ್ಕೆ ಆಗಮಿಸಿದ ಬಾಲಿವುಡ್ ಸೂಪರ್ಸ್ಟಾರ್ Shah Rukh Khan, ಕಾರಣ ಏನು ಗೊತ್ತಾ?
ಶಾರುಖ್ ಖಾನ್ ಅವರ ಈ ಭೇಟಿ ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿದ್ದು, ಅವರು ಭಾಗವಹಿಸಲಿರುವ ಖಾಸಗಿ ಕಾರ್ಯಕ್ರಮದ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ಬಹಿರಂಗಗೊಳ್ಳಬೇಕಿವೆ.

ಮಂಗಳೂರು: ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ಅವರು ಕರ್ನಾಟಕದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಆಗಮಿಸಿದ್ದಾರೆ.
ಮಂಗಳೂರು ನಗರದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ಅವರು ಮಂಗಳೂರಿಗೆ ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಶಾರುಖ್ ಖಾನ್ ಅವರನ್ನು ನೋಡಲು ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಕಾರ್ಯಕ್ರಮದ ಭದ್ರತೆ ಹಾಗೂ ಇತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.
ಶಾರುಖ್ ಖಾನ್ ಅವರ ಈ ಭೇಟಿ ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿದ್ದು, ಅವರು ಭಾಗವಹಿಸಲಿರುವ ಖಾಸಗಿ ಕಾರ್ಯಕ್ರಮದ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ಬಹಿರಂಗಗೊಳ್ಳಬೇಕಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



