'ಪತಿಗಿಂತ ನಿಮ್ಮನ್ನೇ ಹೆಚ್ಚು ಪ್ರೀತಿಸುತ್ತೇನೆ' ಎಂದ ಅಭಿಮಾನಿ; ಶಾರೂಕ್ ಖಾನ್ ಪ್ರತಿಕ್ರಿಯೆಗೆ ನಗುವೋ ನಗು-Viral Video
ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದ ವೇಳೆ ಮಹಿಳೆಯೊಬ್ಬರು, ನನ್ನ ಗಂಡನಿಗಿಂತಲೂ ನಾನು ನಿಮ್ಮನ್ನು ಹೆಚ್ಚು ಪ್ರೀತಿಸುತ್ತೇನೆ ಎಂದು ಹೇಳಿದರು.

ಮಂಗಳೂರಿಗೆ ಇತ್ತೀಚೆಗೆ ಭೇಟಿ ನೀಡಿದ್ದ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರ ಹಾಸ್ಯಪ್ರಜ್ಞೆ ಮತ್ತೊಮ್ಮೆ ಅಭಿಮಾನಿಗಳ ಮನ ಗೆದ್ದಿದೆ. ತಮ್ಮ ಬಾಲಿವುಡ್ ಪ್ರವೇಶದ ಚೊಚ್ಚಲ ಚಿತ್ರ 'ದೀವಾನಾ' ಬಿಡುಗಡೆಯಾಗಿ 33 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಅಭಿಮಾನಿಗಳೊಂದಿಗೆ ಅವರು ಸಂವಾದ ನಡೆಸಿದರು.
ಈ ವೇಳೆ ಮಹಿಳಾ ಅಭಿಮಾನಿಯೊಬ್ಬರೊಂದಿಗೆ ನಡೆದ ಮಾತುಕತೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಯಿತು.
ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದ ವೇಳೆ ಮಹಿಳೆಯೊಬ್ಬರು, ನನ್ನ ಗಂಡನಿಗಿಂತಲೂ ನಾನು ನಿಮ್ಮನ್ನು ಹೆಚ್ಚು ಪ್ರೀತಿಸುತ್ತೇನೆ ಎಂದು ಹೇಳಿದರು.
ಇದಕ್ಕೆ ಕ್ಷಣಾರ್ಧದಲ್ಲೇ ನಗುತ್ತಾ ಪ್ರತಿಕ್ರಿಯಿಸಿದ ಶಾರುಖ್, ಈ ಮಾತನ್ನು ನನಗೆ ನೀವು ಖಾಸಗಿಯಾಗಿ, ನಾನು ಒಬ್ಬಂಟಿಯಾಗಿದ್ದಾಗ ಹೇಳಬೇಕಿತ್ತು ಎಂದು ಹೇಳುತ್ತಿದ್ದಂತೆಯೇ ಸಭಾಂಗಣದಲ್ಲಿ ನಗುವಿನ ಅಲೆ ಎದ್ದಿತು.
ಬಳಿಕ ಅವರು ಹೃತ್ಪೂರ್ವಕವಾಗಿ ಪ್ರತಿಕ್ರಿಯಿಸಿ, ಇದು ಮಾತನಾಡುವ ಭರದಲ್ಲಿ ಹೇಳಿದ ಮಾತು ಎಂಬುದು ನನಗೆ ಗೊತ್ತು. ನಿಮ್ಮ ಭಾವನೆಗಳನ್ನು ನಾನು ಅರ್ಥಮಾಡಿಕೊಳ್ಳುತ್ತೇನೆ. ನಿಮ್ಮ ಪತಿಯೂ ಅದನ್ನು ಅರ್ಥಮಾಡಿಕೊಳ್ಳುತ್ತಾರೆ ಎಂದು ನನಗೆ ನಂಬಿಕೆ ಇದೆ. ನಾನು ನಿಮ್ಮೆಲ್ಲರನ್ನು ಪ್ರೀತಿಸುತ್ತೇನೆ. ನಿಮ್ಮ ಪತಿಯನ್ನೂ, ನಿಮ್ಮ ಕುಟುಂಬವನ್ನೂ ಪ್ರೀತಿಸುತ್ತೇನೆ. ತುಂಬಾ ಧನ್ಯವಾದಗಳು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


