ಯಶ್ ರಾವಣನಾಗಿ ನಟಿಸುತ್ತಿರುವ 'ರಾಮಾಯಣ' ಚಿತ್ರದ ಸೆಟ್‌ನಲ್ಲಿ ಭಾರಿ ಅಗ್ನಿ ಅವಘಡ! Video
ಫೆಡರೇಷನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ (FWICE) ಅಧ್ಯಕ್ಷ ಬಿ.ಎನ್. ತಿವಾರಿ ಈ ಘಟನೆಯನ್ನು ದೃಢಪಡಿಸಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ರಾವಣನಾಗಿ ಕಾಣಿಸಿಕೊಳ್ಳುತ್ತಿರುವ 'ರಾಮಾಯಣ' ಚಿತ್ರದ ಸೆಟ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಗೋರೆಗಾಂವ್ ಪೂರ್ವದ ಫಿಲ್ಮ್ ಸಿಟಿ ಪ್ರದೇಶದಲ್ಲಿ ಸೋಮವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಚಿತ್ರೀಕರಣದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಫೆಡರೇಷನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ (FWICE) ಅಧ್ಯಕ್ಷ ಬಿ.ಎನ್. ತಿವಾರಿ ಈ ಘಟನೆಯನ್ನು ದೃಢಪಡಿಸಿದ್ದಾರೆ. ರಿಲಯನ್ಸ್ ಮೀಡಿಯಾವರ್ಕ್ಸ್ ಬಳಿಯ 'ಪ್ರೈಮ್ ಫೋಕಸ್ ಸ್ಟುಡಿಯೋ'ದ ಹಿಂಭಾಗದಲ್ಲಿರುವ ತಾತ್ಕಾಲಿಕ ಚಿತ್ರೀಕರಣದ ಸೆಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಈ ವೇಳೆ ವಿದ್ಯುತ್ ವೈರಿಂಗ್ ಮತ್ತು ಅಳವಡಿಕೆಗಳು, ಕೇಬಲ್‌ಗಳು, ಬಾಗಿಲುಗಳು, ಮರದ ಹಲಗೆಗಳು, ಎಸಿ (AC) ಘಟಕ, ಬಿದಿರು ಮತ್ತು ಪ್ಲಾಸ್ಟಿಕ್ ಸಾಮಗ್ರಿಗಳು, ಧ್ವನಿವರ್ಧಕ ಉಪಕರಣಗಳು ಹಾಗೂ ಇತರ ನಿರ್ಮಾಣ ಸಾಮಗ್ರಿಗಳು ಸೇರಿದಂತೆ ಚಿತ್ರೀಕರಣಕ್ಕೆ ಸಂಬಂಧಿಸಿದ ಹಲವು ವಸ್ತುಗಳು ಬೆಂಕಿಗೆ ಅಹುತಿಯಾಗಿವೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಮುಂಬೈ ಅಗ್ನಿಶಾಮಕ ದಳದ ತಂಡಗಳು ಬೆಂಕಿಯನ್ನು ನಿಯಂತ್ರಿಸಿವೆ. ಯಾವುದೇ ಸಾವು-ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಈ ಪ್ರದೇಶದಲ್ಲಿ ಅನೇಕ ಸ್ಟುಡಿಯೋಗಳು ಮತ್ತು ನಿರ್ಮಾಣ ಸೆಟ್‌ಗಳಿವೆ. ಇದರಲ್ಲಿ 'ಕಲರ್ಸ್ ಟಿವಿ'ಯ 'ಧಮಾಲ್ ವಿತ್ ಪತಿ ಪತ್ನಿ ಔರ್ ಪಂಗಾ' (ಸೀಸನ್ 2) ಮತ್ತು 'ಎಂಟಿವಿ ಹಸಲ್' (MTV Hustle) ಕಾರ್ಯಕ್ರಮಗಳಿಗೆ ಬಳಸುವ ಸೆಟ್‌ಗಳು ಸೇರಿವೆ.

ರಾಮಾಯಣ ಟ್ರೈಲರ್: ಸೀತಾ ಮಾತೆ ಪಾತ್ರಕ್ಕೆ ಸಾಯಿ ಪಲ್ಲವಿ ಬೇಕಿತ್ತಾ? ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ!
ಅದೃಷ್ಟವಶಾತ್, ಆ ಸಮಯದಲ್ಲಿ 'ಧಮಾಲ್ ವಿತ್ ಪತಿ ಪತ್ನಿ ಔರ್ ಪಂಗಾ' ಕಾರ್ಯಕ್ರಮದ ಚಿತ್ರೀಕರಣ ನಡೆಯುತ್ತಿರಲಿಲ್ಲ, ಆದರೆ 'ಎಂಟಿವಿ ಹಸಲ್' ಸೆಟ್‌ಗೆ ಬೆಂಕಿಯಿಂದ ಹಾನಿಯಾಗಿದೆ ಎಂದು ವರದಿಯಾಗಿದೆ. ಹಾನಿಯ ಪ್ರಮಾಣ ಮತ್ತು ಮುಂದಿನ ಚಿತ್ರೀಕರಣದ ಮೇಲೆ ಉಂಟಾದ ಪರಿಣಾಮಗಳ ಕುರಿತ ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


