ಕನ್ನಡ ನಟಿ ರಕುಲ್ ಪ್ರೀತ್, ನಿರ್ಮಾಪಕ ವಾಶು ಭಗ್ನಾನಿಗೆ ಐಟಿ ಶಾಕ್: ಶಂಕಿತ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಮುಂಬೈನ 12 ಕಡೆಗಳಲ್ಲಿ ದಿಢೀರ್ ದಾಳಿ
ಮುಂಬೈನ ಆದಾಯ ತೆರಿಗೆ ಇಲಾಖೆಯು ನಟಿ ರಕುಲ್ ಪ್ರೀತ್ ಸಿಂಗ್, ಅವರ ಮಾವ ಹಾಗೂ ಖ್ಯಾತ ಚಲನಚಿತ್ರ ನಿರ್ಮಾಪಕ ವಶು ಭಗ್ನಾನಿ ಮತ್ತು ಪನೋರಮಾ ಸ್ಟುಡಿಯೋಸ್‌ಗೆ ಸಂಬಂಧಿಸಿದ 12 ಸ್ಥಳಗಳಲ್ಲಿ ಏಕಕಾಲದಲ್ಲಿ ಭರ್ಜರಿ ಶೋಧ ಕಾರ್ಯ ನಡೆಸುತ್ತಿದೆ. ಆ ಕುರಿತ ವರದಿ ಇಲ್ಲಿದೆ:

ಮುಂಬೈ (ಮಹಾರಾಷ್ಟ್ರ): ಬಾಲಿವುಡ್ ನಟಿ ರಾಕುಲ್ ಪ್ರೀತ್ ಸಿಂಗ್ ಹಾಗೂ ಅವರ ಮಾವ ಹಾಗೂ ಖ್ಯಾತ ಚಲನಚಿತ್ರ ನಿರ್ಮಾಪಕ ವಶು ಭಗ್ನಾನಿ ಮತ್ತು ಪನೋರಮಾ ಸ್ಟುಡಿಯೋಸ್‌ಗೆ ಸಂಬಂಧಿಸಿದ ಮುಂಬೈನ ಒಟ್ಟು 12 ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ (Income Tax Department) ಅಧಿಕಾರಿಗಳು ದಾಳಿ ಮಾಡಿದೆ. ತೆರಿಗೆ ವಂಚನೆ ಮತ್ತು ಚಲನಚಿತ್ರ ನಿರ್ಮಾಣದ ಹೆಸರಿನಲ್ಲಿ ನಿಯಮಬಾಹಿರವಾಗಿ ವಿದೇಶಗಳಿಗೆ ಹಣ ವರ್ಗಾವಣೆ ಮಾಡಿರುವ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಐಟಿ ಇಲಾಖೆಯು ಬೃಹತ್ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಆ ಕುರಿತ ವರದಿ ಇಲ್ಲಿದೆ:
ಯಾರ್ಯಾರ ಮೇಲೆ ದಾಳಿ?
ರಕುಲ್ ಪ್ರೀತ್ ಸಿಂಗ್: ಕನ್ನಡದ ಗಿಲ್ಲಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು, ಪ್ಯಾನ್-ಇಂಡಿಯಾ ನಟಿಯಾಗಿರವ ರಕುಲ್ ಪ್ರೀತ್ ಸಿಂಗ್, ವಶು ಭಗ್ನಾನಿ ಅವರ ಪುತ್ರ ಹಾಗೂ ನಟ-ನಿರ್ಮಾಪಕ ಜಾಕಿ ಭಗ್ನಾನಿ ಅವರನ್ನು ವಿವಾಹವಾಗಿದ್ದಾರೆ.
ವಶು ಭಗ್ನಾನಿ (ಪೂಜಾ ಎಂಟರ್‌ಟೈನ್‌ಮೆಂಟ್): ಬಾಲಿವುಡ್‌ನ ಹಿರಿಯ ಚಲನಚಿತ್ರ ನಿರ್ಮಾಪಕರಾಗಿದ್ದು, ಇವರ ಒಡೆತನದ ಪೂಜಾ ಎಂಟರ್‌ಟೈನ್‌ಮೆಂಟ್ ಸಂಸ್ಥೆಯು ಇತ್ತೀಚಿನ ದಿನಗಳಲ್ಲಿ ಭಾರಿ ಆರ್ಥಿಕ ಸಂಕಷ್ಟ ಹಾಗೂ ಬಾಕಿ ಹಣದ ವಿವಾದ ಎದುರಿಸುತ್ತಿತ್ತು.
ಪನೋರಮಾ ಸ್ಟುಡಿಯೋಸ್: ಚಲನಚಿತ್ರ ನಿರ್ಮಾಪಕ ಕುಮಾರ್ ಮಂಗತ್ ಪಾಠಕ್ ಅವರಿಗೆ ಸೇರಿದ ಹಿಂದಿ ಚಿತ್ರರಂಗದ ಪ್ರಮುಖ ಚಲನಚಿತ್ರ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾಗಿದೆ.
ದಾಳಿಗೆ ಪ್ರಮುಖ ಕಾರಣವೇನು?
ಚಲನಚಿತ್ರ ಯೋಜನೆಗಳಿಗೆ ಧನಸಹಾಯ (ಫಿಲ್ಮ್ ಫೈನಾನ್ಸಿಂಗ್) ಮಾಡುವ ನೆಪದಲ್ಲಿ ಭಾರತದಿಂದ ವಿದೇಶಗಳಿಗೆ ಕಾನೂನುಬಾಹಿರವಾಗಿ ಹಣವನ್ನು ರವಾನಿಸಲಾಗಿದೆ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಅದರಂತೆ, ಆದಾಯ ತೆರಿಗೆ ಇಲಾಖೆಯ ಪ್ರತ್ಯೇಕ ತಂಡಗಳು ಈ ಮೂವರಿಗೂ ಸಂಬಂಧಿಸಿದ ಕಚೇರಿ ಹಾಗೂ ನಿವಾಸಗಳಲ್ಲಿ ಹಣಕಾಸು ದಾಖಲೆಗಳು, ಬ್ಯಾಂಕ್ ಖಾತೆಗಳು ಮತ್ತು ವಿದೇಶಿ ವಹಿವಾಟುಗಳ ನಿಖರ ವಿವರಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ.
ಮುಂದುವರೆದು, ಇತ್ತೀಚೆಗೆ ಬಿಡುಗಡೆಯಾದ ಬಡೆ ಮಿಯಾ ಚೋಟೆ ಮಿಯಾ ಚಿತ್ರದ ಸೋಲಿನ ನಂತರ, ಚಿತ್ರದ ತಾಂತ್ರಿಕ ಸಿಬ್ಬಂದಿ ಮತ್ತು ಸಹ-ಕಲಾವಿದರಿಗೆ ಹಲವು ತಿಂಗಳುಗಳಿಂದ ವೇತನ ಪಾವತಿಸಿಲ್ಲ ಎಂಬ ಗಂಭೀರ ಆರೋಪವು ಪೂಜಾ ಎಂಟರ್‌ಟೈನ್‌ಮೆಂಟ್ಸ್ ಮೇಲೆ ಕೇಳಿಬಂದಿತ್ತು. ಜೊತೆಗೆ, ಸಾಲವನ್ನು ತೀರಿಸಲು ಮುಂಬೈನಲ್ಲಿರುವ ತಮ್ಮ ಪ್ರಮುಖ ಕಚೇರಿ ಕಟ್ಟಡವನ್ನು ಮಾರಾಟ ಮಾಡಿದ್ದಾರೆ ಎಂಬ ವರದಿಗಳು ಹರಿದಾಡಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



