ಸಾಹಸಸಿಂಹನ ಸ್ಮಾರಕ ಕೆಲಸಕ್ಕೆ ಚಾಲನೆ ನೀಡಲಿರುವ ಮುಖ್ಯಮಂತ್ರಿ
ಸಾಹಸಸಿಂಹ ಡಾ.ವಿಷ್ಣುವರ್ಧನ್

ಬೆಂಗಳೂರು: ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಐದನೇ ಪುಣ್ಯತಿಥಿಯ ಅಂಗವಾಗಿ ಡಿಸೆಂಬರ್ ೩೦ ರಂದು ದಿನಪೂರ್ತಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ದಿವಂಗತ ನಟನ ಹೆಸರಿನಲ್ಲಿ, ಎರಡು ಎಕರೆ ಜಾಗದಲ್ಲಿ ತಲೆ ಎತ್ತಲಿರುವ ಸ್ಮಾರಕದ ಕೆಲಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗುದ್ದಲಿ ಪೂಜೆ ಮಾಡುವುದರೊಂದಿಗೆ ದಿನದ ಕಾರ್ಯಕ್ರಮಗಳು ಪ್ರಾರಂಭವಾಗಲಿವೆ. ನಟನ ಸಮಾಧಿ ಇರುವ ಅಭಿಮಾನ್ ಸ್ಟುಡಿಯೋದ ಹತ್ತಿರದಲ್ಲೆ ಈ ಸ್ಮಾರಕ ನಿರ್ಮಾಣವಾಗಲಿದೆ. ಪತ್ನಿ ಭಾರತಿ ವಿಷ್ಣುವರ್ಧನ್ ಮತ್ತು ಅಳಿಯ ಅನಿರುಧ್, ವಿಷ್ಣುವರ್ಧನ್ ಅವರ ಜೀವನ ಕುರಿತ ಒಂದು ಚಿತ್ರಪುಸ್ತಕ "ಪತ್ತೇದಾರ ಸಾಹಸಸಿಂಹ" ಬಿಡುಗಡೆ ಮಾಡಲಿದ್ದಾರೆ. ರಕ್ತದಾನ ಮತ್ತು ಅಂಗದಾನ ಶಿಬಿರ, ಗಿಡಗಳ ವಿತರಣೆ ಮತ್ತು ಇತರ ಧರ್ಮಾರ್ಥ ಕೆಲಸಗಳನ್ನು ವಿಷ್ಣುವರ್ಧನ್ ಅವರ ಅಭಿಮಾನಿಗಳು ಹಮ್ಮಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


