`ಮಹಾಕಾಳಿ’ ಚಿತ್ರದ ಚಿತ್ರೀಕರಣ ಪೂರ್ಣ

ಸಿಂಹಾದ್ರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮೇಶ್ ಕಶ್ಯಪ್ ಅವರು ನಿರ್ಮಿಸುತ್ತಿರುವ `ಮಾಹಾಕಾಳಿ' ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.
ದಿಲೀಪ್ ಹಾಗೂ ಪೂಜಾ ಅಭಿನಯಿಸಿದ ಹಾಡೊಂದನ್ನು ಚಿತ್ರಿಸಿಕೊಳ್ಳುವುದರೊಂದಿಗೆ ನಿರ್ದೇಶಕ ಎಸ್.ಮಹೇಂದರ್ ಚಿತ್ರೀಕರಣವನ್ನು ಪೂರ್ಣಗೊಳ್ಳಿಸಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ನಿರ್ಮಿಸಲಾಗಿದ್ದ ಸೆಟ್‍ನಲ್ಲಿ, ಓರಾಯನ್ ಮಾಲ್, ಮಿನರ್ವಮಿಲ್‍ನಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ.
`ಮಹಾಕಾಳಿ' ಚಿತ್ರಕ್ಕೆ ತೊಂಭತ್ತು ದಿನಗಳ ಕಾಲ ಬೆಂಗಳೂರು, ಮೈಸೂರು ಹಾಗೂ ಲಡಾಕ್‍ನಲ್ಲಿ ಚಿತ್ರೀಕರಣ ನಡೆದಿದೆ. ಡಿ ಟಿ ಎಸ್ ಕೂಡ ಮುಕ್ತಾಯವಾಗಿದೆ. ಚಿತ್ರ ಜನವರಿಯಲ್ಲಿ ತೆರೆಗೆ ಬರಲಿದೆ.
ಅಜಯ್ ಕುಮಾರ್ ಅವರು ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರವನ್ನು ಎಸ್.ಮಹೇಂದರ್ ನಿರ್ದೇಶಿಸುತ್ತಿದ್ದಾರೆ. ಸೆಲ್ವಂ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಅನಿಲ್‍ಕುಮಾರ್ ಸಂಭಾಷಣೆ ಬರೆದಿದ್ದಾರೆ.
ಅಪಾರ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಮಾಲಾಶ್ರೀ ಅಭಿನಯಿಸುತ್ತಿದ್ದಾರೆ. ಶ್ರೀನಿವಾಸಮೂರ್ತಿ, ಎಂ.ಎನ್.ಲಕ್ಷ್ಮೀದೇವಿ, ದಿಲೀಪ್, ಪೂಜಾ, ಪದ್ಮಿನಿಪ್ರಕಾಶ್, ಜೈಜಗದೀಶ್, ಮೈಕೋ ನಾಗರಾಜ್, ಭಜರಂಗಿ ಲೋಕಿ, ಪ್ರೇಮಲತಾ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


