ಸಲ್ಮಾನ್ ವಿರುದ್ಧ ಎಫ್ ಐ ಆರ್ ದಾಖಲಿಸಲು ಮುಂಬೈ ಪೊಲೀಸರಿಗೆ ಕೋರ್ಟ್ ಸೂಚನೆ
ಕಳೆದ ವರ್ಷ ನವೆಂಬರ್ ೪ ರಂದು ಮುಂಬೈ-ದೆಹಲಿ ಮಾರ್ಗಮಧ್ಯದ ವಿಮಾನದಲ್ಲಿ ತನ್ನ ಮೇಲೆ ಹಲ್ಲೆ ನಡೆಸಿ ಕೆಲವು ಸರ್ಕಾರಿ ದಾಖಲೆಗಳನ್ನು ಸಲ್ಮಾನ್ ಖಾನ್

ಮುಂಬೈ: ಕಳೆದ ವರ್ಷ ನವೆಂಬರ್ ೪ ರಂದು ಮುಂಬೈ-ದೆಹಲಿ ಮಾರ್ಗಮಧ್ಯದ ವಿಮಾನದಲ್ಲಿ ತನ್ನ ಮೇಲೆ ಹಲ್ಲೆ ನಡೆಸಿ ಕೆಲವು ಸರ್ಕಾರಿ ದಾಖಲೆಗಳನ್ನು ಸಲ್ಮಾನ್ ಖಾನ್ ಮತ್ತು ಅವರ ಅಂಗರಕ್ಷಕ ಕಸಿದುಕೊಂಡಿದ್ದರು ಎಂದು ಭ್ರಷ್ಟಾಚಾರ ನಿರ್ಮೂಲನ ಸಮಿತಿ ಸದ್ಯ ರವೀಂದ್ರ ಮೂರತ್ ದ್ವಿವೇದಿ ದೂರು ನೀಡಿದ್ದರು.
ಮಹಾರಾಷ್ಟ್ರ ಬಿಜೆಪಿ ನಾಯಕ ಗೋಪಿನಾಥ್ ಮುಂಡೆ ಅವರ ಸಾವಿನ ಪ್ರಕರಣದಲ್ಲಿ ಸರ್ಕಾರಕ್ಕೆ ನೀಡಬೇಕಿದ್ದ ಕೆಲವು ಮುಖ್ಯ ದಾಖಲೆಗಳು ನನ್ನಲ್ಲಿದ್ದವು ಎಂದಿದ್ದಾರೆ ದ್ವಿವೇದಿ.
ವಿಮಾನ ನಿಲ್ದಾಣದ ಪೊಲೀಸರು ಸಲ್ಮಾನ್ ಖಾನ್ ವಿರುದ್ಧ ದೂರು ದಾಖಲಿಸಿಕೊಳ್ಳಲು ನಿರಾಕರಿಸಿದರು ಎಂದು ಕೂಡ ದ್ವಿವೇದಿ ದೂರಿದ್ದಾರೆ.
ಈಗ ನ್ಯಾಯಾಲಯ ಸೆಕ್ಷನ್ ೩೯೨(ದರೋಡೆ), ೩೨೩(ಹಲ್ಲೆ) ಮತ್ತು ಇನ್ನಿತರ ಎರಡು ಸೆಕ್ಷನ್ ಗಳಿಡಿ ಸಲ್ಮಾನ್ ಖಾನ್ ಮತ್ತು ಅವರ ಸಹಚರರ ವಿರುದ್ಧ ದೂರು ದಾಖಲಿಸುವಂತೆ ಮುಂಬೈ ಪೊಲೀಸರಿಗೆ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


