ಕನ್ನಡದ ಕೋಟ್ಯಾಧಿಪತಿ-3ರ ಸಾರಥಿ ಯಾರು?
ಪುನೀತ್ ರಾಜ್ ಕುಮಾರ್ ನೇತೃತ್ವದಲ್ಲಿ ಕನ್ನಡದ ಕೋಟ್ಯಾಧಿಪತಿ ಸೀಸನ್ 1 ಮತ್ತು 2 ನಡೆದು...

ಬೆಂಗಳೂರು: ಪುನೀತ್ ರಾಜ್ ಕುಮಾರ್ ನೇತೃತ್ವದಲ್ಲಿ ಕನ್ನಡದ ಕೋಟ್ಯಾಧಿಪತಿ ಸೀಸನ್ 1 ಮತ್ತು 2 ನಡೆದು ಕಾರ್ಯಕ್ರಮ ಕನ್ನಡಿಗರ ಮನ ಗೆದ್ದಿದ್ದು ಈಗ ಹಳೆಯ ವಿಷಯ. ಹೊಸ ವಿಷಯ ಏನೆಂದರೆ ಕನ್ನಡದ ಕೋಟ್ಯಾಧಿಪತಿ ಸೀಸನ್ 3 ಆರಂಭಿಸಲು ವಾಹಿನಿಯೊಂದು ನಿರ್ಧರಿಸಿದೆ ಎಂಬುದು.
ಈ ಶೋವನ್ನು ಯಾರು ನಡೆಸಿಕೊಡುತ್ತಾರೆ ಎಂಬುದು ಕುತೂಹಲಕರ ಸಂಗತಿ. ಪುನೀತ್ ರಾಜ್ ಕುಮಾರ್ ಅವರು 5 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿದ್ದಾರೆ. ಆದರೆ ಚಾನೆಲ್ ಅಷ್ಟು ಕೊಡಲು ಮುಂದೆ ಬರುತ್ತಿಲ್ಲವಂತೆ. ಹಾಗಾಗಿ ಅವರು ಶೋ ನಡೆಸಿಕೊಡುವುದರಿಂದ ಹಿಂದೆ ಸರಿದಿದ್ದಾರಂತೆ.
ಶೋ ಸಾರಥ್ಯ ವಹಿಸುವವರಲ್ಲಿ ನಟರಾದ ಉಪೇಂದ್ರ, ಯಶ್, ರಮ್ಯಾ ಮೊದಲಾದವರ ಹೆಸರು ಸುಳಿದಾಡುತ್ತಿದೆ. ಪುನೀತ್ ರಾಜ್ ಕುಮಾರ್ ಅವರು ಸಾಕಷ್ಟು ಶ್ರಮ ಹಾಕಿ ಕಾರ್ಯಕ್ರಮವನ್ನು ಜನಪ್ರಿಯಗೊಳಿಸಿದ್ದರು. ಮನೆಗಳಲ್ಲಿ ಎಲ್ಲಾ ವರ್ಗದ ಜನರು ಕಾದು ಕುಳಿತು ಈ ಕಾರ್ಯಕ್ರಮವನ್ನು ವೀಕ್ಷಿಸುತ್ತಿದ್ದರು.
ಇದೀಗ ಅದೇ ಜನಪ್ರಿಯತೆಯನ್ನು ಕಾಯ್ದುಕೊಳ್ಳುವ, ಶೋವನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಹೋಗುವವರು ಬೇಕಾಗಿದೆ. ಪುನೀತ್ ಬದಲಿಗೆ ಉಪ್ಪಿ ಹಾಟ್ ಸೀಟಿನಲ್ಲಿ ಕುಳಿತು ಕಾರ್ಯಕ್ರಮ ನಡೆಸಿಕೊಡುತ್ತಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಆದರೆ ಈ ಬಗ್ಗೆ ಉಪೇಂದ್ರ ಅವರಾಗಲಿ, ವಾಹಿನಿ ಕಡೆಯಿಂದಾಗಲಿ ಖಚಿತ ಸುದ್ದಿ ಹೊರಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


