ಸಿನಿಮಾ ಸುದ್ದಿ

ಜನವರಿ 22ಕ್ಕೆ "ರಿಕ್ಕಿ" ತೆರೆಗೆ ತರಲು ಸಿದ್ಧತೆ

ರಕ್ಷಿತ್ ಶೆಟ್ಟಿ ಮತ್ತು ಹರಿಪ್ರಿಯ ಅಭಿನಯದ ಬಹು ನಿರೀಕ್ಷಿತ ರಿಕ್ಕಿ ಚಿತ್ರವನ್ನು ಮುಂಬರುವ ಜನವರಿ 22ಕ್ಕೆ ತೆರಲು ಚಿತ್ರತಂಡ ಸಕಲ ಸಿದ್ಧತೆ ನಡೆಸಿಕೊಂಡಿದೆ...

ಜನವರಿ 22ಕ್ಕೆ "ರಿಕ್ಕಿ" ತೆರೆಗೆ ತರಲು ಸಿದ್ಧತೆ
ರಿಕ್ಕಿ ಚಿತ್ರದ ಪೋಸ್ಟರ್ (ಸಂಗ್ರಹ ಚಿತ್ರ)
Published On :

ಬೆಂಗಳೂರು: ರಕ್ಷಿತ್ ಶೆಟ್ಟಿ ಮತ್ತು ಹರಿಪ್ರಿಯ ಅಭಿನಯದ ಬಹು ನಿರೀಕ್ಷಿತ ರಿಕ್ಕಿ ಚಿತ್ರವನ್ನು ಮುಂಬರುವ ಜನವರಿ 22ಕ್ಕೆ ತೆರಲು ಚಿತ್ರತಂಡ ಸಕಲ ಸಿದ್ಧತೆ ನಡೆಸಿಕೊಂಡಿದೆ.

ಚಿತ್ರವನ್ನು ರಿಷಬ್ ಶೆಟ್ಟಿ ನಿರ್ದೇಶಿಸಿದ್ದು, ಇದು ಅವರ ಮೊದಲ ಪ್ರಯತ್ನವಾಗಿದೆ. ವಿಭಿನ್ನ ಪೋಸ್ಟರ್ ನಿಂದಲೇ ಗಮನ ಸೆಳೆದಿದ್ದ ರಿಕ್ಕಿ ಚಿತ್ರದ ಬಗೆಗಿನ ಕುತೂಹಲ ಇಮ್ಮಡಿಯಾಗಿದ್ದು, ಇದೇ  ಕುತೂಹಲವನ್ನು ಉಳಿಸಿಕೊಳ್ಳಲು ಚಿತ್ರತಂಡ ಚಿತ್ರದ ಆಡಿಯೋವನ್ನು ವಿಭಿನ್ನವಾಗಿ ರಿಲೀಸ್ ಮಾಡಲು ಮುಂದಾಗಿದೆ. ಇದೇ ಡಿಸೆಂಬರ್ 31ರ ರಾತ್ರಿ ನಡೆಯುವ ಹೊಸವರ್ಷದ  ಸಂಭ್ರಮಾಚರಣೆ ವೇಳೆ ವಿಶೇಷ ಕಾರ್ಯಕ್ರಮದ ಮೂಲಕ ಆಡಿಯೋ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿದೆ.

ಅರ್ಜುನ್ ಜನ್ಯ ಚಿತ್ರಕ್ಕೆ ಸಂಗೀತ ನೀಡಿದ್ದು, ಇದೇ ಡಿಸೆಂಬರ್ 31ರ ರಾತ್ರಿ ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ಅಂಬೇಡ್ಕರ್ ಸ್ಟೇಡಿಯಂನಲ್ಲಿ ವಿಶೇಷ ಆರ್ಕೆಸ್ಟ್ರಾ ಆಯೋಜಿಸಲಾಗಿರುವ  ವಿಶೇಷ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಅವರ ಪಾಲ್ಗೊಂಡು, ಅಲ್ಲಿ ಚಿತ್ರದ ಹಾಡುಗಳನ್ನು ಒಂದೊಂದಾಗಿ ಹಾಡುವ ಮೂಲಕ ವಿಭಿನ್ನವಾಗಿ ಆಡಿಯೋ ಬಿಡುಗಡೆ ಮಾಡಲಾಗುತ್ತಿದೆ. ಸುಮಾರು  ಎರಡೂವರೆ ಗಂಟೆಗಳ ನಡೆಯುವ ಈ ಕಾರ್ಯಕ್ರಮದಲ್ಲಿ ನಾಯಕ ರಕ್ಷಿತ್ ಶೆಟ್ಟೆ ಟೈಗರ್ ಡ್ಯಾನ್ಸ್ ಮಾಡುವ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ.

ನಕ್ಸಲಿಸಮ್ ಅನ್ನು ಕೇಂದ್ರೀಕರಿಸಿಕೊಂಡು ಚಿತ್ರದ ಕಥೆಯನ್ನು ಹೆಣೆಯಲಾಗಿದ್ದು, ಕೆಲ ಕಮರ್ಷಿಯಲ್ ಅಂಶಗಳನ್ನು ಕೂಡ ಸೇರಿಸಿಕೊಳ್ಳಲಾಗಿದೆ. ಖಂಡಿತ ಈ ಚಿತ್ರ ಪ್ರೇಕ್ಷಕರನ್ನು ರಂಜಿಸುವಲ್ಲಿ  ಯಶಸ್ವಿಯಾಗುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ. ಇನ್ನು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಚ್ಯುತ್ ಕುಮಾರ್, ಕಿಶೋರ್ ಮತ್ತು ಪ್ರಮೋದ್ ಶೆಟ್ಟಿ ಅವರು ಕಾಣಿಸಿಕೊಂಡಿದ್ದಾರೆ.  ಚಿತ್ರವನ್ನು ಎಸ್ ವಿ ಬಾಬು ಅವರು ನಿರ್ಮಾಣ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.