ಮಾರ್ಚ್‍ನಲ್ಲಿ 'ಗೋವಾ' ತೆರೆಗೆ

ಶಂಕರ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಂಕರ್‍ಗೌಡ, ಸಿ.ಎಂ.ಆರ್ ಶಂಕರ್‍ರೆಡ್ಡಿ ಹಾಗೂ ರಜತ್ ಮಂಜುನಾಥ್ ಅವರು ನಿರ್ಮಿಸಿರುವ `ಗೋವಾ’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಮಾರ್ಚ್‍ನಲ್ಲಿ ರಾಜ್ಯಾದ್ಯಂತ ಬಿಡುಗಡೆಯಗುತ್ತಿದೆ.
ಶರ್ಮಿಳಾ ಮಾಂಡ್ರೆ ಅವರು 'ಗೋವಾ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ರೀ ಎಂಟ್ರಿ ಕೊಟ್ಟಿದ್ದು, ಕೋಮಲ್ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರದಲ್ಲಿ ಹಾಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಶರ್ಮಿಳಾ ಹಾಟ್ ಅವತಾರ ನೋಡಲು ಚಿತ್ರದ ಬಿಡುಗಡೆಯಾಗುವವರೆಗೆ ಕಾಯಬೇಕಾಗಿದೆ.
ಸೂರ್ಯ ಅವರು ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಕೋಮಲ್, ತರುಣ್‍ಚಂದ್ರ, ಶ್ರೀಕಾಂತ್, ಶರ್ಮಿಳಾಮಾಂಡ್ರೆ, ರಚಲ್, ಸೋನುಗೌಡ, ಅಶೋಕ್, ಶೋಭ್‍ರಾಜ್, ರಮೇಶ್‍ಭಟ್, ಬುಲೆಟ್‍ಪ್ರಕಾಶ್, ಧರ್ಮ, ಕರಿಸುಬ್ಬು ಮುಂತಾದವರಿದ್ದಾರೆ.
ಅರ್ಜುನ್‍ಜನ್ಯ ಸಂಗೀತವಿರುವ ಈ ಚಿತ್ರಕ್ಕೆ ರಾಜೇಶ್ ಅವರ ಛಾಯಾಗ್ರಹಣವಿದೆ. ದೀಪು.ಎಸ್.ಕುಮಾರ್ ಸಂಕಲನ, ಮುರಳಿ, ನಿಕ್ಸನ್ ನೃತ್ಯ ನಿರ್ದೇಶನ, ಕೌರವ ವೆಂಕಟೇಶ್ ಸಾಹಸ ನಿರ್ದೆಶನವಿರುವ ಈ ಚಿತ್ರಕ್ಕೆ ಆನಂದ್ ಕಲಾ ನಿರ್ದೇಶನವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


