ಪ್ರಧಾನಿ ಮೋದಿ ಭೇಟಿ ಮಾಡಿದ ನಟ ಪ್ರಭಾಸ್
ವಿಶ್ವದಾದ್ಯಂತ ಭಾರಿ ಹೆಸರು ಮಾಡುತ್ತಿರುವ ರಾಜಮೌಳಿ ನಿರ್ದೇಶನದ ಬಾಹುಬಲಿ ಚಿತ್ರದ ನಾಯಕ ಪ್ರಭಾಸ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭಾನುವಾರ ಭೇಟಿಯಾಗಿದ್ದು, ಬಾಹುಬಲಿ ಚಿತ್ರ ನೋಡುವಂತೆ...

ನವದೆಹಲಿ: ವಿಶ್ವದಾದ್ಯಂತ ಭಾರಿ ಹೆಸರು ಮಾಡುತ್ತಿರುವ ರಾಜಮೌಳಿ ನಿರ್ದೇಶನದ ಬಾಹುಬಲಿ ಚಿತ್ರದ ನಾಯಕ ಪ್ರಭಾಸ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭಾನುವಾರ ಭೇಟಿಯಾಗಿದ್ದು, ಬಾಹುಬಲಿ ಚಿತ್ರ ನೋಡುವಂತೆ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.
ನವದೆಹಲಿಯ ರೇಸ್ ಕೋರ್ಸ್ ರಸ್ತೆಯಲ್ಲಿರುವ ಪ್ರಧಾನಿ ಮೋದಿ ಅವರು ಅಧಿಕೃತ ನಿವಾಸಕ್ಕೆ ನಿನ್ನೆ ಭೇಟಿ ನೀಡಿದ ನಟ ಪ್ರಭಾಸ್, ತಮ್ಮ ಅಭಿನಯದ ಬಾಹುಬಲಿ ಚಿತ್ರವನ್ನು ವೀಕ್ಷಿಸುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಪ್ರಭಾಸ್ ಅವರ ಚಿಕ್ಕಪ್ಪ, ಚಿಕ್ಕಮ್ಮ ಹಾಗೂ ಹಿರಿಯ ನಟ ಕೃಷ್ಣಂ ರಾಜು ಸಹ ಹಾಜರಿದ್ದರು ಎಂದು ಹೇಳಲಾಗುತ್ತಿದೆ.
ಈ ಕುರಿತಂತೆ ಖಾಸಗಿ ಸುದ್ದಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿರುವ ನಟ ಪ್ರಭಾಸ್ ಅವರು, ಇದು ನನ್ನ ಜೀವನದ ಅತ್ಯಂತ ಅಮೂಲ್ಯವಾದ ದಿನ. ನರೇಂದ್ ಮೋದಿ ಅವರ ಕಟ್ಟ ಅಭಿಮಾನಿಯಾಗಿದ್ದು, ಮೋದಿ ಅವರನ್ನು ಭೇಟಿಯಾದ ಈ ದಿನವನ್ನು ನಾನು ಎಂದಿಗೂ ಮರೆಯುವುದಿಲ್ಲ. ಪ್ರಧಾನಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಸಮಯ ಸಿಗುತ್ತಿದ್ದಂತೆ ಬಾಹುಬಲಿ ಚಿತ್ರ ವೀಕ್ಷಿಸುವಂತೆ ಮನವಿ ಮಾಡಿದೆ. ಇದಕ್ಕೆ ಉತ್ತರಿಸಿದ ಮೋದಿ ಅವರು, ಪ್ರಸ್ತುತ ಸಾಕಷ್ಟು ಕೆಲಸಗಳಿದೆ ಬಿಡುವು ಸಿಕ್ಕಾಗ ಖಂಡಿತವಾಗಿಯೂ ಸಿನಿಮಾ ನೋಡುತ್ತೇನೆಂದು ಹೇಳಿದರು ಎಂದು ಹೇಳಿದ್ದಾರೆ.
ಪ್ರಭಾಸ್ ಭೇಟಿ ಕುರಿತಂತೆ ಪ್ರಧಾನಿ ಮೋದಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದು, ಭೇಟಿ ಕುರಿತ ಫೋಟೋವೊಂದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


