ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ ಮರು ಬಿಡುಗಡೆ!
ಸಿನಿಮಾ ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ, ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ ಸಿನೆಮಾ ರಾಜ್ಯಾದ್ಯಂತ ಮರು ಬಿಡುಗಡೆಯಾಗಲಿದೆ...

ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ತಾರಾ ಜೋಡಿ ಯಶ್ ಮತ್ತು ರಾಧಿಕಾ ಪಂಡಿತ್ ಅಭಿನಯದ ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ ಸಿನೆಮಾ ಭರ್ಜರಿ ಪ್ರದರ್ಶನ ಕಂಡದ್ದು ಹಳೆಯ ಸುದ್ದಿ.
ಕೇವಲ ನಮ್ಮ ರಾಜ್ಯದಲ್ಲಿ ಮಾತ್ರವಲ್ಲದೆ ಹೊರ ರಾಜ್ಯಗಳಲ್ಲಿ, ಹೊರ ದೇಶಗಳಲ್ಲಿ ಕೂಡ ಚಿತ್ರ ರಸಿಕರು ಈ ಸಿನಿಮಾವನ್ನು ಇಷ್ಟಪಟ್ಟಿದ್ದರು. ಈಗಲೂ ಕೂಡ ಕೆಲವು ಥಿಯೇಟರ್ ಗಳಲ್ಲಿ, ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ಒಡುತ್ತಿದೆ.
ಈಗ ಹೊಸ ವಿಷಯ ಏನೆಂದರೆ, ಈ ವಾರ ಮತ್ತೆ ಸಿನಿಮಾ ಬಿಡುಗಡೆಯಾಗುತ್ತಿದೆ.ಸಿನಿಮಾ ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ, ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ ಸಿನೆಮಾ ರಾಜ್ಯಾದ್ಯಂತ ಮರು ಬಿಡುಗಡೆಯಾಗಲಿದೆ. ಈ ಮೂಲಕ ಪ್ರೇಕ್ಷಕರ ಖುಷಿಯನ್ನು ಇಮ್ಮಡಿಗೊಳಿಸಲಿದೆ. ರಾಮಾಚಾರಿಗೆ ಚಿಯರ್ಸ್..
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


