ಸುದ್ದಿಗೋಷ್ಠಿಯಲ್ಲಿ ಭಾವುಕರಾಗಿ ಕಣ್ಣೀರಿಟ್ಟ ಹಾಸ್ಯ ನಟ ಬುಲೆಟ್ ಪ್ರಕಾಶ್
ಭುಜಂಗ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣ ವೇಳೆ ಗಾಯಗೊಂಡಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರು ಇಂದು ಪ್ರತಿಕ್ರಿಯೆ ನೀಡಿದ್ದು, ಹಿಂದಿನ ಘಟನೆಗಳನ್ನು ನೆನೆದು ಬುಧವಾರ ಸಾರ್ವಜನಿಕವಾಗಿ ಕಣ್ಣೀರಿಟ್ಟಿದ್ದಾರೆ...

ಬೆಂಗಳೂರು: ಭುಜಂಗ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣ ವೇಳೆ ಗಾಯಗೊಂಡಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರು ಇಂದು ಪ್ರತಿಕ್ರಿಯೆ ನೀಡಿದ್ದು, ಹಿಂದಿನ ಘಟನೆಗಳನ್ನು ನೆನೆದು ಬುಧವಾರ ಸಾರ್ವಜನಿಕವಾಗಿ ಕಣ್ಣೀರಿಟ್ಟಿದ್ದಾರೆ.
ಘಟನೆ ಕುರಿತಂತೆ ಸುದ್ಧಿಗೋಷ್ಟಿಯಲ್ಲಿ ಮಾತನಾಡಿರುವ ಅವರು, ಭುಜಂಗ ಚಿತ್ರದ ಚಿತ್ರೀಕರಣದ ವೇಳೆ ನನಗೆ ಏನೂ ಆಗಲಿಲ್ಲ. ತಾಯಿ ಚಾಮುಂಡೇಶ್ವರಿ ಕೃಪೆಯಿಂದ ಅಪಾಯದಿಂದ ಪಾರಾಗಿದ್ದೇನೆ. ಸಿನಿಮಾ ಚಿತ್ರಿಕರಣದಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿರುತ್ತದೆ. ಈ ಹಿಂದೆಯೂ ನಾನು ಅಪಘಾತಕ್ಕೀಡಾಗಿದ್ದೆ. ಆ ವೇಳೆ ನಾನು ಸಾವನ್ನಪ್ಪಿದ್ದೇನೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು ಎಂದು ಹಿಂದೆ ನಡೆದ ಘಟನೆಗಳನ್ನು ನೆನೆದು ಬುಲೆಟ್ ಪ್ರಕಾಶ್ ಕಣ್ಣೀರು ಹಾಕಿದ್ದಾರೆ.
ಭುಜಂಗ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣವನ್ನು ಮೈಸೂರಿನ ವರುಣದಲ್ಲಿ ಸೆರೆ ಹಿಡಿಯಲಾಗುತ್ತಿತ್ತು. ಹಗ್ಗ ಕಟ್ಟಿದ ಬೈಕ್ ಮೇಲೆ ಪ್ರಜ್ವಲ್ ದೇವರಾಜ್ ಹಾಗೂ ಬುಲೆಟ್ ಪ್ರಕಾಶ್ ಕುಳಿತಿದ್ದರು. ಈ ವೇಳೆ ಬೈಕ್ ಗೆ ಕಟ್ಟಿದ ಹಗ್ಗವು ತುಂಡಾಗಿದೆ. ಪರಿಣಾಮ ಆಯತಪ್ಪಿ ಕೆಳಗೆ ಬೀಳುತ್ತಿದ್ದ ಬುಲೆಟ್ ಪ್ರಕಾಶ್ ಅವರನ್ನು ಸಿಬ್ಬಂದಿಗಳು ನೋಡಿ, ತಕ್ಷಣ ರಕ್ಷಣೆಗೆ ಧಾವಿಸಿ ಅಪಾಯಕ್ಕೆ ಸಿಲುಕುತ್ತಿದ್ದ ಬುಲೆಟ್ ಪ್ರಕಾಶ್ ಅವರನ್ನು ರಕ್ಷಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


