ಸಿನಿಮಾ ಸುದ್ದಿ

ಠಾಣೆಗೆ ಬಂದ ಸನ್ನಿ ಲಿಯೋನ್!

ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಅಶ್ಲೀಲ ಚಿತ್ರಗಳನ್ನು ಪ್ರದರ್ಶಿಸಿದ್ದ ಆರೋಪದಡಿ ನಟಿ ಸನ್ನಿ ಲಿಯೋನ್ ಥಾಣೆಯ ಡೊಂಬಿವಲಿಯ....

ಠಾಣೆಗೆ ಬಂದ ಸನ್ನಿ ಲಿಯೋನ್!
ಸನ್ನಿ ಲಿಯೋನ್
Published On :

ಥಾಣೆ: ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಅಶ್ಲೀಲ ಚಿತ್ರಗಳನ್ನು ಪ್ರದರ್ಶಿಸಿದ್ದ ಆರೋಪದಡಿ ನಟಿ ಸನ್ನಿ ಲಿಯೋನ್ ಥಾಣೆಯ ಡೊಂಬಿವಲಿಯ ರಾಮನಗರ ಪೊಲೀಯ್ ಠಾಣೆಗೆ ಹಾಜರಾಗಿದ್ದರು.

ಠಾಣೆಗೆ ಹಾಜರಾಗಿದ್ದ ಸನ್ನಿ ಲಿಯೋನ್ ಪ್ರಕರಣ ಸಂಬಂಧ ಪೊಲೀಸರಿಗೆ ಹೇಳಿಕೆ ನೀಡಿದ್ದಾಳೆ. ಮೇ 14 ರಂದು ಸನ್ನಿ ಲಿಯೋನ್ ವಿರುದ್ಧ ಹಿಂದೂ ಜನಜಾಗೃತಿ ಸಮಿತಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಡೊಂಬಿವಿಲಿಯ ನಿವಾಸಿ ಅಂಜಲಿ ವಿನೋದ್ ಪಾಲನ್ ಅವರು ಸನ್ನಿ ಲಿಯೋನ್ ವಿರುದ್ಧ ದೂರು ದಾಖಲಿಸಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಚಿತ್ರಗಳನ್ನು ಹಾಕಿ ಭಾರತೀಯ ಸಂಸ್ಕೃತಿಗೆ ಧಕ್ಕೆ ಉಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಮನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

 ಈ ಸಂಬಂಧ ಪೊಲೀಸರು ಮೊದಲಿಗೆ ಸನ್ನಿ ಲಿಯೋನ್ ಗೆ ನೊಟೀಸ್ ನೀಡಿದ್ದರು. ಅವರಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದರಿಂದ ಠಾಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.