ಪ್ರಿಯಾಮಣಿ ನಿರ್ದೇಶನದ ಚಿತ್ರದಲ್ಲಿ ಸುದೀಪ್ ನಟನೆ!
ಬಾಲಿವುಡ್‌ನಲ್ಲೂ ಅಭಿನಯಿಸಿರುವ ದಕ್ಷಿಣ ಭಾರತದ ಖ್ಯಾತ ನಟಿ ಪ್ರಿಯಾಮಣಿ ಅವರು ಇದೀಗ ನಿರ್ದೇಶನದತ್ತ ಗಮನ...

ಬಾಲಿವುಡ್‌ನಲ್ಲೂ ಅಭಿನಯಿಸಿರುವ ದಕ್ಷಿಣ ಭಾರತದ ಖ್ಯಾತ ನಟಿ ಪ್ರಿಯಾಮಣಿ ಅವರು ಇದೀಗ ನಿರ್ದೇಶನದತ್ತ ಗಮನ ಹರಿಸಿದ್ದಾರೆ.
ಹೌದು, ಮಲೆಯಾಳಿ ಬೆಡಗಿ ಬಿಗ್‌ಬಾಸ್ ಸೀಸನ್ 3ರಲ್ಲಿ ಈ ವಿಷಯ ಬಹಿರಂಗಪಡಿಸಿದ್ದಾರೆ. ಬಿಗ್‌ಬಾಸ್ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಪ್ರಿಯಾಮಣಿಗೆ, ಕಿಚ್ಚ ಸುದೀಪ್ ಅವರು ನಿರ್ದೇಶಕಿಯಾಗುವ ಬಯಕೆ ಇದೆಯೇ ಎಂದು ಪ್ರಶ್ನಿಸಿದರು.
ಹೌದು, ನನಗೂ ನಿರ್ದೇಶನದ ಬಗ್ಗೆ ತುಂಬಾ ಆಸಕ್ತಿ ಇದೆ, ನೀವು ಯೆಸ್ ಎಂದರೆ, ನಿಮ್ಮೊಂದಿಗೆ ಒಂದು ರೊಮ್ಯಾಂಟಿಕ್ ಕಾಮಿಡಿ ಚಿತ್ರ ಮಾಡಬೇಕು ಅಂದುಕೊಂಡಿದ್ದೇನೆ ಎಂದರು. ಇದಕ್ಕೆ ಹಾಸ್ಯಮಯವಾಗಿಯೇ ಉತ್ತರಿಸಿದ ಸುದೀಪ್, ಪೇಮೆಂಟ್ ಕೊಟ್ಟರೆ ಓಕೆ ಎಂದರು.
ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಸಿನಿಮಾ ರಂಗಗಳಲ್ಲಿ ತಮ್ಮದೇಯಾದ ಛಾಪು ಮೂಡಿಸಿರುವ ಮಲೆಯಾಳಿ ಬೆಡಗಿ, ಇತ್ತೀಚಿಗೆ ಕಿರುತೆರೆ ರಿಯಾಲಿಟಿ ಷೋನಲ್ಲೂ ಜಡ್ಜ ಆಗಿ ಕೆಲಸ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


