ನಾಗತಿಹಳ್ಳಿ ಚಂದ್ರಶೇಖರ್ ಮೇಲೆ ಹೆಜ್ಜೇನು ದಾಳಿ: ಐಸಿಯು ಗೆ ದಾಖಲು
ನಿರ್ದೇಶಕ ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ಅವರು ಹೆಜ್ಜೇನು ಕಡಿತಕ್ಕೊಳಕಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ವರದಿಯಾಗಿದೆ. ...

ಕುಂದಾಪುರ: ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ಅವರು ಹೆಜ್ಜೇನು ಕಡಿತಕ್ಕೊಳಕಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ವರದಿಯಾಗಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ಸಮೀಪದ ಬರ್ವೆ ಎಂಬಲ್ಲಿ ಹಿನ್ನೀರ ಪ್ರದೇಶದಲ್ಲಿ ತಮ್ಮ ನಿರ್ದೇಶನದ ಹೊಸ ಚಿತ್ರ 'ಇಷ್ಟಕಾಮ್ಯ'ದ ಶೂಟಿಂಗ್ ಸಂದರ್ಭದಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.
ಚಂದ್ರಶೇಖರ್ ಮಾತ್ರವಲ್ಲದೆ ಚಿತ್ರದ ಕ್ಯಾಮೆರಾಮೆನ್ ಚಂದ್ರು ಹಾಗೂ ನಾಗತಿಹಳ್ಳಿ ಅವರ ಕಾರು ಚಾಲಕ ಕೃಷ್ಣ ಅವರಿಗೂ ಹೆಜ್ಜೇನು ಕಚ್ಚಿರುವುದಾಗಿ ಹೇಳಲಾಗಿದೆ. ನಾಗತಿಹಳ್ಳಿ ಚಂದ್ರಶೇಖರ್ ಅವರನ್ನು ಇದೀಗ ಕುಂದಾಪುರದ ಚಿನ್ಮಯಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ತುರ್ತು ನಿಗಾ ಚಿಕಿತ್ಸಾ ಘಟದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


