ಗೋವಾ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳದಿರಲು ಕೆಎಫ್‌ಸಿಸಿ ನಿರ್ಧಾರ
ಕಳಸ ಬಂಡೂರಿ ಯೋಜನೆಗೆ ಅಡ್ಡಿ ಹಾಗೂ ಗೋವಾದಲ್ಲಿರೋ ಕನ್ನಡಿಗರಿಗೆ ತೊಂದರೆ ಹಿನ್ನೆಲೆ ಗೋವಾ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳದಿರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ...

Published On :
ಬೆಂಗಳೂರು: ಕಳಸ ಬಂಡೂರಿ ಯೋಜನೆಗೆ ಅಡ್ಡಿ ಹಾಗೂ ಗೋವಾದಲ್ಲಿರೋ ಕನ್ನಡಿಗರಿಗೆ ತೊಂದರೆ ಹಿನ್ನೆಲೆ ಗೋವಾ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳದಿರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ.
ಇಂದು ನಡೆದ ಕರ್ನಾಟಕ ಫಿಲಂ ಚೇಂಬರ್ ಸಭೆಯಲ್ಲಿ ನವೆಂಬರ್ 20 ರಿಂದ ನ. 30ರವರೆಗೆ ನಡೆಯಲಿರುವ ಗೋವಾ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳದಿರುವ ಬಗ್ಗೆ ತಿರ್ಮಾನಿಸಲಾಗಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ ಗೋವಿಂದು ಅವರು ಹೇಳಿದ್ದಾರೆ.
ಚಿತ್ರೋತ್ಸವದಲ್ಲಿ ಕರ್ನಾಟಕ ಫಿಲಂ ಚೇಂಬರ್ ಭಾಗಿಯಾಗಲ್ಲ ಹಾಗೂ ಚೇಂಬರ್ ವತಿಯಿಂದ ಯಾರೂ ಸಹ ಪಾಲ್ಗೊಳ್ಳುವುದಿಲ್ಲ. ಗೋವಾದಲ್ಲಿರುವ ಕನ್ನಡಿಗರಿಗೆ ತೊಂದರೆ ಕೊಡಬಾರದು. ತೊಂದರೆ ಕೊಡಬಾರದು ಎಂಬ ಕಾರಣದಿಂದ ಚಲನಚಿತ್ರೋತ್ಸವದಲ್ಲಿ ಭಾಗಿಯಾಗದೆ ಪ್ರತಿಭಟನೆ ನಡೆಸುವುದಾಗಿ ಎಂದು ಗೋವಿಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


