ಹರ್ಷ ನಿರ್ದೇಶನದ ಚಿತ್ರದಲ್ಲಿ ದುನಿಯಾ ವಿಜಯ್ ನಾಯಕ ನಟ
ಇದೇ ಮೊದಲ ಬಾರಿಗೆ ಸ್ಯಾಂಡಲ್ ವುಡ್ ನಲ್ಲಿ ದುನಿಯಾ ವಿಜಯ್ ನಟನೆಯ ಚಿತ್ರಕ್ಕೆ ನಿರ್ದೇಶಕ ಹರ್ಷ ನಿರ್ದೇಶನ ಮಾಡಲಿದ್ದಾರೆ ಎಂಬ ವದಂತಿ ಗಾಂಧಿ ನಗರದಲ್ಲಿ ಹರಿದಾಡುತ್ತಿತ್ತು.

ಇದೇ ಮೊದಲ ಬಾರಿಗೆ ಸ್ಯಾಂಡಲ್ ವುಡ್ ನಲ್ಲಿ ದುನಿಯಾ ವಿಜಯ್ ನಟನೆಯ ಚಿತ್ರಕ್ಕೆ ನಿರ್ದೇಶಕ ಹರ್ಷ ನಿರ್ದೇಶನ ಮಾಡಲಿದ್ದಾರೆ ಎಂಬ ವದಂತಿ ಗಾಂಧಿ ನಗರದಲ್ಲಿ ಹರಿದಾಡುತ್ತಿತ್ತು.
ದುನಿಯಾ ವಿಜಯ್ ಗೆ ನಿರ್ದೇಶನ ಮಾಡುತ್ತಿರುವುದನ್ನು ಖಚಿತಪಡಿಸಿರುವ ನಟ ವಿಜಯ್, ಕೆಪಿ ಶ್ರೀಕಾಂತ್ ನಿರ್ಮಾಣದಲ್ಲಿ ತಮ್ಮ ಚಿತ್ರಕ್ಕೆ ಹರ್ಷ ನಿರ್ದೇಶನ ಮಾಡುತ್ತಿದ್ದು, ಮೂವರ ಸಂಯೋಜನೆ ವಿಭಿನ್ನವಾಗಿರಲಿದೆ ಎಂದು ಹೇಳಿದ್ದಾರೆ. ನೃತ್ಯ ಸಂಯೋಜಕ, ನಿರ್ದೇಶಕನಾಗಿರುವ ಹರ್ಷ ನಿರ್ದೇಶನದಲ್ಲಿ ಅಭಿನಯಿಸುವುದು ಹೊಸ ಅನುಭವ ನೀಡಲಿದೆ ಎಂದು ಹೇಳಿದ್ದಾರೆ.
ಶ್ರೀಕಾಂತ್ ನಿರ್ಮಾಣದ ಮೊದಲ ಚಿತ್ರ ಇದಾಗಿದ್ದು, ಚಿತ್ರದ ಸ್ಕ್ರಿಪ್ಟ್ ತಯಾರಾಗುತ್ತಿದೆ ಎಂದು ವಿಜಯ್ ಹೇಳಿದ್ದಾರೆ. ಪ್ರಸ್ತುತ ಮಾರುತಿ 800 ಚಿತ್ರದಲ್ಲಿ ನಿರ್ದೇಶಕ ಹರ್ಷ ಕಾರ್ಯನಿರತರಾಗಿದ್ದರೆ, ದುನಿಯಾ ವಿಜಯ್ ದನಾಕಾಯೋನು ಚಿತ್ರಿಕರಣವನ್ನು ಪೂರ್ಣಗೊಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


