ಸಿವಿಲ್ ಇಂಜಿನಿಯರಿಂಗ್ ಪ್ರಶ್ನೆ ಪತ್ರಿಕೆಯಲ್ಲಿ ಬಾಹುಬಲಿ ಚಿತ್ರದ ಪ್ರಶ್ನೆ
ಸಿನಿಮಾ ಕ್ಷೇತ್ರದಲ್ಲಿ ದಾಖಲೆ ಬರೆದಿದ್ದ ಬಾಹುಬಲಿ ಚಿತ್ರ ಈಗ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ನಡೆಸಲಾಗಿದ್ದ ಆಂತರಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲೂ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ.

ಚೆನ್ನೈ: ಸಿನಿಮಾ ಕ್ಷೇತ್ರದಲ್ಲಿ ದಾಖಲೆ ಬರೆದಿದ್ದ ಬಾಹುಬಲಿ ಚಿತ್ರ ಈಗ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ನಡೆಸಲಾಗಿದ್ದ ಆಂತರಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲೂ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ.
ತಮಿಳುನಾಡಿನ ಪ್ರಸಿದ್ಧ ಶಿಕ್ಷಣ ಸಂಸ್ಥೆಯಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗದ ನಿರ್ಮಾಣಾತ್ಮಕ ವಿಶ್ಲೇಷಣೆ ಪ್ರಶ್ನೆ ಪತ್ರಿಕೆಯಲ್ಲಿ ಬಾಹುಬಲಿ ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ನಡೆಯುವ ಯುದ್ಧದ ದೃಶ್ಯಕ್ಕೆ ಸಂಬಂಧಿಸಿದಂತೆ ಸೆಟ್ ಪೀಸ್(ಸಂಯೋಜನಾ ತುಣುಕನ್ನು) ವಿನ್ಯಾಸ ಗೊಳಿಸುವಂತೆ ಪ್ರಶ್ನೆ ಕೇಳಲಾಗಿದೆ.
ಈ ಬಗ್ಗೆ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿದ ವಿಐಟಿಯ ಸಹಾಯಕ ಪ್ರಾಧ್ಯಾಪಕ ಮಹೇಂದ್ರ ಗಟ್ಟು ವಿದ್ಯಾರ್ಥಿಗಳ ಕಲಿಕಾ ವಿಧಾನದಲ್ಲಿ ಉತ್ಸಾಹ ತುಂಬಲು ಈ ರೀತಿ ಪ್ರಶ್ನೆಯನ್ನು ಕೇಳಿರುವುದಾಗಿ ಹೇಳಿದ್ದಾರೆ. ಸಾಂಪ್ರದಾಯಿಕ ಪಠ್ಯಪುಸ್ತಕ ಪ್ರಶ್ನೆಗಳನ್ನು ಕೇಳುವ ಬದಲು ಪ್ರಸಿದ್ಧ ಚಿತ್ರದ ಉದಾಹರಣೆಯನ್ನು ನೀಡಿ ಪ್ರಶ್ನೆ ಕೇಳಲಾಗಿದೆ. ಬಾಹುಬಲಿ ಚಿತ್ರದ ಸೆಟ್ ನ ಉದಾಹರಣೆ ನೀಡಿ ವಿವಿಧ ಫ್ರೇಮ್ ಗಳಲ್ಲಿ ನಾಯಕ ಎಲ್ಲಿಂದ ಜಿಗಿಯುತ್ತಾನೆ ಎಂದು ಕೇಳಲಾಗಿತ್ತು. ಈ ಪ್ರಶ್ನೆಗೆ 20 ಅಂಕಗಳನ್ನು ನಿಗದಿ ಮಾಡಿ ನಟರ ರಕ್ಷಣೆಯನ್ನು ದೃಉಷ್ಟಿಯಲ್ಲಿಟ್ಟುಕೊಂಡು ಗರಿಷ್ಠ ರಚನೆಯ ಸ್ಥಿರತೆಯನ್ನು ವಿನ್ಯಾಸಗೊಳಿಸಲು ಕೇಳಲಾಗಿತ್ತು.
ಸಿಎಟಿ ಪ್ರಶ್ನೆ ಪತ್ರಿಕೆ ಮಾದರಿಯನ್ನು ಸಂಪೂರ್ಣವಾಗಿ ಪರಿಷ್ಕರಿಸಲಾಗಿದ್ದು, ವಿದ್ಯಾರ್ಥಿಗಳಿಗೆ ತರಗತಿಯ ನೋಟ್ಸ್ ನ್ನು ಬಳಕೆ ಮಾಡಲು ಅವಕಾಶ ನೀಡಲಾಗಿದೆ. ಹಾಗೂ ಪ್ರಾಧ್ಯಾಪಕರಿಕೆ ಪ್ರಶ್ನೆ ಪತ್ರಿಕೆಯನ್ನು ಸಂಯೋಜಿಸಲು ತರಬೇತಿ ನೀಡಲಾಗಿದೆ ಎಂದು ಸ್ಕೂಲ್ ಆಫ್ ಮೆಕಾನಿಕಲ್ ಹಾಗೂ ಬಿಲ್ಡಿಂಗ್ ಸೈನ್ಸ್ ನ ಸಿಬ್ಬಂದಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


