ನಟ ದರ್ಶನ್ ಗೆ ಗಾಯ, ಜಗ್ಗುದಾದಾ ಶೂಟಿಂಗ್ ಸ್ಥಗಿತ
ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಜಿಮ್ ನಲ್ಲಿ ವರ್ಕೌಟ್ ಮಾಡುವ ಸಂದರ್ಭದಲ್ಲಿ ಎಡಗೈಗೆ ಗಾಯವಾಗಿದ್ದು ಅವರನ್ನು ....

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಜಿಮ್ ನಲ್ಲಿ ವರ್ಕೌಟ್ ಮಾಡುವ ಸಂದರ್ಭದಲ್ಲಿ ಎಡಗೈಗೆ ಗಾಯವಾಗಿದ್ದು ಅವರನ್ನು ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಬೆಳಗ್ಗೆ ತಮ್ಮ ಮನೆಯ ಜಿಮ್'ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ದರ್ಶನ್ ಎಡಗೈ ಮಣಿಕಟ್ಟಿಗೆ ಗಾಯವಾಗಿದ್ದರಿಂದ ಕೂಡಲೇ ಬಿಜಿಎಸ್ ಆಸ್ಪತ್ರೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಅವರ ಎಡಗೈ ಮೂಳೆಗೆ ಏರ್ ಕ್ರಾಕ್ ಆಗಿದ್ದು ಶೂಟಿಂಗ್ ನಲ್ಲಿ ಭಾಗವಹಿಸದಂತೆ ಆಸ್ಪತ್ರೆ ವೈದ್ಯರು ಸೂಚಿಸಿದ್ದಾರೆ.
ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಚ್ ಆಗಿದ್ದು ವೈದ್ಯರ ಸಲಹೆ ಮೇರೆಗೆ 20 ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ದರ್ಶನ್ ಎಡಗೈಗೆ ಗಾಯವಾಗಿರುವ ಹಿನ್ನೆಲೆಯಲ್ಲಿ ಜಗ್ಗುದಾದ ಚಿತ್ರದ ಚಿತ್ರೀಕರಣ ಕೆಲದಿನಗಳ ಮಟ್ಟಿಗೆ ಸ್ಥಗಿತಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


