ಬಿಗ್ ಬಾಸ್ ಸೀಸನ್-3ಗೆ ಸುದೀಪ್ ಪಕ್ಕಾ: ಶೀಘ್ರದಲ್ಲಿಯೇ ಪ್ರೋಮೊ ಶೂಟ್
ಕಿಚ್ಚ ಸುದೀಪ್ ಬಿಗ್ ಬಾಸ್ ಸೀಸನ್-3ಯಿಂದ ಹೊರಹೋಗುತ್ತಾರೆ ಎಂಬ ಕಳೆದ ಹಲವು ದಿನಗಳಿಂದ ಗಾಂಧಿನಗರದಲ್ಲಿ ಹರಿದಾಡುತ್ತಿದ್ದ ಊಹಾಪೋಹಗಳಿಗೆ ನಟ ಸುದೀಪ್ ತೆರೆ ಎಳೆದಿದ್ದಾರೆ...

ಬೆಂಗಳೂರು: ಕಿಚ್ಚ ಸುದೀಪ್ ಬಿಗ್ ಬಾಸ್ ಸೀಸನ್-3ಯಿಂದ ಹೊರಹೋಗುತ್ತಾರೆ ಎಂಬ ಕಳೆದ ಹಲವು ದಿನಗಳಿಂದ ಗಾಂಧಿನಗರದಲ್ಲಿ ಹರಿದಾಡುತ್ತಿದ್ದ ಊಹಾಪೋಹಗಳಿಗೆ ನಟ ಸುದೀಪ್ ತೆರೆ ಎಳೆದಿದ್ದಾರೆ.
ಬಿಗ್ ಬಾಸ್ ಸೀಸನ್-3ಯಲ್ಲಿ ನಟ ಕಿಚ್ಚ ಸುದೀಪ್ ಪಾಲ್ಗೊಳ್ಳುತ್ತಿಲ್ಲ ಅವರ ಬದಲಾಗಿ ನಟ ಉಪೇಂದ್ರ ಅವರು ನಿರೂಪಣೆಯ ಜವಾಬ್ದಾರಿ ಹೊರಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಇದಕ್ಕೆ ಇಂಬು ನೀಡುವಂತೆ ಸುದೀಪ್ ಅವರ ದಾಪಂತ್ಯ ಜೀವನ ಕೂಡ ಮುರಿದು ಬಿದ್ದು, ಸುದೀಪ್ ಮತ್ತು ಪತ್ನಿ ಪ್ರಿಯಾ ರಾಧಾಕೃಷ್ಣನ್ ವಿಚ್ಚೇದನಕ್ಕಾಗಿ ಕೋರ್ಟ್ ಮೊರೆ ಹೋಗಿದ್ದರು. ಹೀಗಾಗಿ ಕೌಟುಂಬಿಕ ಬಿಕ್ಕಟ್ಟಿನ ಹಿನ್ನಲೆಯಲ್ಲಿ ನಟ ಸುದೀಪ್ ಬಿಗ್ ಬಾಸ್ ಸೀಸನ್3ಯಿಂದ ಹೊರ ಹೋಗುತ್ತಾರೆ ಎಂದೇ ಭಾವಿಸಲಾಗಿತ್ತು.
ಇದೀಗ ಈ ಎಲ್ಲ ಊಹಾಪೋಹಗಳಿಗೆ ಸ್ವತಃ ನಟ ಸುದೀಪ್ ಅವರೇ ತೆರೆ ಎಳೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸುದೀಪ್ ಅವರು, ಬಿಗ್ ಬಾಸ್ ಸೀಸನ್ 3ಯಿಂದ ನಾನು ಹೊರಹೋಗುವ ಎಲ್ಲ ಊಹಾಪೋಹಗಳು ಸುಳ್ಳು. ನಿನ್ನೆಯಷ್ಟೇ ಕಾರ್ಯಕ್ರಮ ಆಯೋಜಕರೊಂದಿಗೆ ನಾನು ಚರ್ಚಿಸಿದ್ದೇನೆ. ಶೀಘ್ರದಲ್ಲಿಯೇ ಕಾರ್ಯಕ್ರಮದ ಪ್ರೋಮೊ ಶೂಟ್ ಕೂಡ ಮಾಡಲಿದ್ದೇನೆ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.
ಕಳೆದ ಶುಕ್ರವಾರ ನಟ ಸುದೀಪ್ ಮತ್ತು ಅವರ ಪತ್ನಿ ಪ್ರಿಯಾ ರಾಧಾಕೃಷ್ಣನ್ ಅವರು ವಿಚ್ಚೇದನ ಕೋರಿ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇದು ಸುದ್ದಿ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೆ ನಟ ಸುದೀಪ್ ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮದ ಮೇಲೂ ಇದು ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


