ಬಿಗ್ ಬಾಸ್-3 ಮನೆಗೆ ಚಂದನ್ ಎಂಟ್ರಿ?
ತಮ್ಮ ಸಿಕ್ಸ್ ಪ್ಯಾಕ್ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಸುದ್ದಿ ಮಾಡುತ್ತಿರುವ, ಇಂದ್ರಜಿತ್ ಲಂಕೇಶ್ ನಿರ್ದೇಶನದ 'ಲವ್ ಯು ಆಲಿಯಾ' ಚಿತ್ರದ ನಾಯಕ ಚಂದನ್...

ತಮ್ಮ ಸಿಕ್ಸ್ ಪ್ಯಾಕ್ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಸುದ್ದಿ ಮಾಡುತ್ತಿರುವ, ಇಂದ್ರಜಿತ್ ಲಂಕೇಶ್ ನಿರ್ದೇಶನದ 'ಲವ್ ಯು ಆಲಿಯಾ' ಚಿತ್ರದ ನಾಯಕ ಚಂದನ್ ಅವರು ಈಗ ಬಿಗ್ ಬಾಸ್ ಮನೆಯಲ್ಲಿ ಬಾಡಿ ಪ್ರದರ್ಶಿಸಲು ಮುಂದಾಗಿದ್ದಾರೆ.
ಹೌದು, ಮೂಲಗಳ ಪ್ರಕಾರ ಕಿರುತೆರೆಯಿಂದ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಚಂದನ್ ಅವರಿಗೆ ಸುದೀಪ್ ಅವರ ಬಿಗ್ ಬಾಸ್ ಸೀಸನ್ 3ಕ್ಕೆ ಬರುವಂತೆ ಆಹ್ವಾನ ನೀಡಲಾಗಿದೆ. ಆದರೆ ಈ ಬಗ್ಗೆ ಕಾರ್ಯಕ್ರಮ ಪ್ರಸಾರ ಮಾಡುವ ಮಾಧ್ಯಮ ಅಥವಾ ನಟ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
'ಲವ್ ಯು ಆಲಿಯಾ' ಈ ವಾರ ಬಿಡುಗಡೆಗೆ ಸಿದ್ಧವಾಗಿದ್ದು, ಚಂದನ್ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದಾರೆ.
ಲಕ್ಷ್ಮೀ ಬಾರಮ್ಮ ಧಾರವಾಹಿಯ ಮೂಲಕ ಖ್ಯಾತಿ ಗಳಿಸಿದ್ದ ಚಂದನ್ ಸದ್ಯ ಗಾಂಧಿನಗರದಲ್ಲಿ ಗಟ್ಟಿ ನೆಲೆ ಕಂಡುಕೊಳ್ಳುವ ಯತ್ನದಲ್ಲಿದ್ದಾರೆ. ಚಂದನ್ ಅಭಿನಯದ ಕಟ್ಟೆ ಮತ್ತು ಎರಡೊಂದ್ಲೆ ಮೂರು ಚಿತ್ರಗಳು ಅಷ್ಟಾಗಿ ಹೆಸರು ತಂದುಕೊಡಲಿಲ್ಲ. ಆದರೆ ರವಿಚಂದ್ರನ್, ಭೂಮಿಕಾ ಚಾವ್ಲಾ ಹಾಗೂ ಸುದೀಪ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ಲವ್ ಯು ಆಲಿಯಾ ಚಿತ್ರದ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಅಲ್ಲದೆ ಚಿತ್ರದಲ್ಲಿ ನೀಲಿ ತಾರೆ ಸನ್ನಿ ಲಿಯೋನ್ ಹಾಗೂ ಸೃಜನ್ ಲೋಕೇಶ್ ಸಹ ಇದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


