ಖ್ಯಾತ ಗಾಯಕಿ ಆಶಾ ಭೋಸ್ಲೆ ಹಿರಿಯ ಪುತ್ರ ಹೇಮಂತ್ ನಿಧನ
ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ಹಿರಿಯ ಪುತ್ರ ಹೇಮಂತ್ ಅವರು ಸೋಮವಾರ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ...

ನವದೆಹಲಿ: ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ಹಿರಿಯ ಪುತ್ರ ಹೇಮಂತ್ ಅವರು ಸೋಮವಾರ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ದೀರ್ಘಕಾಲದಿಂದ ಕ್ಯಾನ್ಸರ್ ಗೆ ತುತ್ತಾಗಿ ಸ್ಕಾಟ್ ಲೆಂಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 66 ವರ್ಷದ ಹೇಮಂತ್ ಚಿಕಿತ್ಸೆ ಫಲಿಸದೇ ಸೋಮವಾರ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳ ತಿಳಿಸಿವೆ. ವಿಪರ್ಯಾಸವೆಂದರೆ ಆಶಾ ಭೋಸ್ಲೆ ಅವರ ಹಿರಿಯ ಸಹೋದರಿ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ 86ನೇ ಜನ್ಮದಿನದಂದೇ ಹೇಮಂತ್ ಇಹಲೋಕ ತ್ಯಜಿಸಿದ್ದಾರೆ.
ಬಹುಮುಖ ಪ್ರತಿಭೆಯಾಗಿದ್ದ ಹೇಮಂತ್ ಸಂಗೀತ ಸಂಯೋಜಕರಾಗಿದ್ದರು. ಅಲ್ಲದೆ ಸುಮಾರು 15 ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ದಾಮಾದ್’ ಚಿತ್ರದಲ್ಲಿ ಅವರು ಸಂಗೀತ ನೀಡಿದ್ದ ‘ಜಾಗೆ ಜಾಗೆ ನೈನೋ ಮೇ’ ಅವರಿಗೆ ಚಿತ್ರರಂಗದಲ್ಲಿ ಖ್ಯಾತಿ ತಂದು ಕೊಟ್ಟಿತ್ತು. ಅಲ್ಲದೇ ಮರಾಠಿ ಭಾಷೆಯಲ್ಲಿ ಆಶಾ ಭೋಸ್ಲೆ ಹಾಡಿದ ಹಲವಾರು ಟಾಪ್ ಹಾಡುಗಳಿಗೆ ಅವರು ಸಂಗೀತ ಸಂಯೋಜನೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


